ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ಸರ್ಕಲ್ ಬಳಿ ನಡೆದಿದೆ.
ಕಾವೇರಿ ಭವನದಿಂದ ದೊಡ್ಡಬಳ್ಳಾಪುರಕ್ಕೆ ತೆರಳುತ್ತಿದ್ದ ಕೆಎ 40, ಎಫ್ 0994 ನಂಬರಿನ ಬಸ್, ಕೆಎ 43, ವಿ 8208 ನಂಬರಿನ ಡಿಯೋ ಸ್ಕೂಟರ್ ಮೇಲೆ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಅಪಘಾತವಾಗುತ್ತಿದ್ದಂತೆ ಕೆಎಸ್ಆರ್ಟಿಸಿ ಬಸ್ ಚಾಲಕ ಹಾಗೂ ಕಂಡಕ್ಟರ್ ಪರಾರಿಯಾಗಿದ್ದಾರೆ. ಮೃತ ಸವಾರನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹೆಬ್ಬಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.