ಭಾರೀ ಮಳೆಗೆ ತತ್ತರಿಸಿದ ತಿರುಪತಿ| ತಗ್ಗುಪ್ರದೇಶ ಮುಳುಗಡೆ, ಕೊಚ್ಚಿ ಹೋದ ವಾಹನಗಳು| ಸಂಕಟದಲ್ಲಿ ವೆಂಕಟರಮಣ|
ತಿರುಪತಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ವಿಶ್ವದ ಅತ್ಯಂತ ಸಿರಿವಂತ ದೇವರಾದ ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದಿಟ್ಟಿದೆ. ಬುಧವಾರ ರಾತ್ರಿಯಿಂದೀಚೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ತಿರುಪತಿಯ ಹಲವು ತಗ್ಗುಪ್ರದೇಶ ಮತ್ತು ಜನವಸತಿ ಪ್ರದೇಶಗಳು ನೀರಿನಲ್ಲಿ ಮುಳುಗಿದ್ದು ಪ್ರವಾಹ ಕಾಣಿಸಿಕೊಂಡಿದೆ. ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹಕ್ಕೆ ಸಿಕ್ಕಿ ವಾಹನಗಳು ಕೊಚ್ಚಿ ಹೋಗುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ಇನ್ನು ತಿರುಮಲ ಬೆಟ್ಟಕ್ಕೆ ಹತ್ತುವ ರಸ್ತೆ ಮಾರ್ಗದಲ್ಲಿ ಹಲವೆಡೆ ಭೂಕುಸಿತ ಉಂಟಾಗಿದ್ದು, ಮರಗಳು […]