ಗ್ರಾಹಕರಿಗೆ ಅಗ್ಗದ ದರದಲ್ಲಿ ಮರಳು ಒದಗಿಸಲು ಕ್ರಮ| ನೂತನ ಮರಳು ನೀತಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಸ್ತು|
ಬೆಂಗಳೂರು: ಗ್ರಾಹಕರಿಗೆ ಅತ್ಯಂತ ಅಗ್ಗದ ದರದಲ್ಲಿ ಹಾಗೂ ಸುಲಭವಾಗಿ ಮರಳು ಒದಗಿಸಲು ರಾಜ್ಯ ಸರಕಾರ ‘ನೂತನ ಮರಳು ನೀತಿ’ಯನ್ನು ಜಾರಿಗೊಳಿಸಲು ಸಚಿವ ಸಂಪುಟ ಮಹತ್ವದ ತೀರ್ಮಾನ ಮಾಡಿದೆ. ಸೋಮವಾರ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಮೇಲ್ಕಂಡ ತೀರ್ಮಾನ ಮಾಡಿದ್ದು, ಕನಿಷ್ಠಪಕ್ಷ ಒಂದು ಲಾರಿ ಲೋಡ್ ಮರಳು 10ಸಾವಿರ ರೂ.ಗಳಿಂದ 12ಸಾವಿರ ರೂ.ಗಳಿಗೆ ದೊರಕಿಸಿಕೊಡಲು ಉದ್ದೇಶಿಸಿದ್ದು, ಮರಳು ಗಣಿಗಾರಿಕೆಯಲ್ಲಿ ಪಾರದರ್ಶಕತೆಯನ್ನು ತರಲು ಮುಂದಾಗಿದೆ ಎಂದು ಕಾನೂನು […]