November 2021

ಕಡಬ| ಆಪರೇಶನ್ ಚೀತಾ ಸಕ್ಸಸ್| ಕೋಳಿ ಹಿಡಿಯಲು ಬಂದ ಚಿರತೆ ಬೋನೊಳಗೆ ಬಂಧಿ|

ಕಡಬ: ಕೋಳಿ ಹಿಡಿಯಲು ಬಂದ ಚಿರತೆಯೊಂದು ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳ ಯಶಸ್ವಿ ಕಾರ್ಯಾಚರಣೆಯಿಂದ ಚಿರತೆಯನ್ನು ರಕ್ಷಿಸುವ ಕಾರ್ಯ ನಡೆದಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರ ರಾಮಯ್ಯ ಗೌಡ ಎಂಬವರ ಮನೆಯ ಮುಂಭಾಗದ ಬಾವಿಗೆ ಬಿದ್ದಿತ್ತು. ಮಾಹಿತಿ‌ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ಸೂಕ್ತ ಭದ್ರತೆಯೊಂದಿಗೆ ಸಂಜೆಯ ವೇಳೆಗೆ ಚಿರತೆಯ ರಕ್ಷಣಾ ಕಾರ್ಯವನ್ನು ಆರಂಭಿಸಿದ್ದರು. ಬೋನು ತಂದು ಬಾವಿಯ ಕಟ್ಟೆಯ ಸಮೀಪ ಇಟ್ಟು ಬಾವಿಯ ಮೇಲಿನ ಭಾಗಕ್ಕೆ ಬಲೆ ಹಾಸಿ ಏಣಿ ಇಳಿಸಲಾಗಿದ್ದು, […]

ಕಡಬ| ಆಪರೇಶನ್ ಚೀತಾ ಸಕ್ಸಸ್| ಕೋಳಿ ಹಿಡಿಯಲು ಬಂದ ಚಿರತೆ ಬೋನೊಳಗೆ ಬಂಧಿ| Read More »

ಪಾಕ್‌ ನೌಕಾಪಡೆಯಿಂದ ಗುಂಡಿನ ದಾಳಿ, ಭಾರತದ ಮೀನುಗಾರನ ಹತ್ಯೆ

ಗಾಂಧಿನಗರ: ಗುಜರಾತ್‌ನ ಕರಾವಳಿ ಭಾಗದಲ್ಲಿ ಭಾರತದ ಮೀನುಗಾರನನ್ನು ಪಾಕಿಸ್ತಾನ ನೌಕಾಪಡೆ ಗುಂಡಿಟ್ಟು ಹತ್ಯೆ ಮಾಡಿದ ಘಟನೆ ನಡೆದಿದೆ. ಗುಜರಾತ್‌ನ ದ್ವಾರಕಾದಲ್ಲಿ ಓಖಾ ಪಟ್ಟಣದ ಬಳಿ “ಜಲ್‌ಪರಿ” ಎಂಬ ಹೆಸರಿನ ಬೋಟ್‌ನಲ್ಲಿ ಪಾಕಿಸ್ತಾನದ ನೌಕಾಪಡೆಯು ಗುಂಡಿನ ದಾಳಿ ನಡೆಸಿತ್ತು. ಗುಂಡಿನ ದಾಳಿಯಿಂದ ಭಾರತದ ಒಬ್ಬ ಮೀನುಗಾರ ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಪಾಕ್‌ ನೌಕಾಪಡೆಯಿಂದ ಗುಂಡಿನ ದಾಳಿ, ಭಾರತದ ಮೀನುಗಾರನ ಹತ್ಯೆ Read More »

ಜ್ಯೂಸ್ ನಲ್ಲಿ ಅಮಲು ಪದಾರ್ಥ ಬೆರೆಸಿ ರೌಡಿಶೀಟರ್‌ನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ – ಆರೋಪಿ ಅಂದರ್

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ರೌಡಿಶೀಟರ್‌ ಅತ್ಯಾಚಾರ ನಡೆಸಿರುವ ಘಟನೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೈಕಂಬದ ಹೊಟೇಲ್ ಒಂದರಲ್ಲಿ ಬಾಣಸಿಗನಾಗಿದ್ದ ರೌಡಿಶೀಟರ್ ನವೀನ್ ಸಿಕ್ವೇರ ಎಂದು ಗುರುತಿಸಲಾಗಿದೆ. ಬಾಲಕಿ ಸಹೋದರನ ಪರಿಚಯದ ಹಿನ್ನೆಲೆ ಬಾಲಕಿ‌ ನಂಬರ್ ಪಡೆದಿದ್ದ ರೌಡಿಶೀಟರ್ ಆಕೆ ಮನೆಯಲ್ಲಿ ಒಬ್ಬಳೇ ಇರುವ ವೇಳೆ ಮನೆಗೆ ಬಂದು ಬಾಲಕಿಗೆ ಜ್ಯೂಸ್ ನಲ್ಲಿ ನಿದ್ದೆ ಬರೊ ಮದ್ದು ಬೆರೆಸಿ ಅತ್ಯಾಚಾರ ಮಾಡಿದ್ದ ಎನ್ನಲಾಗಿದೆ. ಇನ್ನು ಅತ್ಯಾಚಾರವೆಸಗಿ ಆರೋಪಿಯು

ಜ್ಯೂಸ್ ನಲ್ಲಿ ಅಮಲು ಪದಾರ್ಥ ಬೆರೆಸಿ ರೌಡಿಶೀಟರ್‌ನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ – ಆರೋಪಿ ಅಂದರ್ Read More »

ಉಡುಪಿ : ಜಿಪ್ ಜಾರಿಸಿ ಖಾಸಗಿ ಅಂಗ ತೋರಿಸುತ್ತಿದ್ದ ಕಂಡಕ್ಟರ್‌ನ ಕಾಮದ ಪಿತ್ತ ಇಳಿಸಿದ ನರ್ಸಿಂಗ್ ವಿದ್ಯಾರ್ಥಿನಿಯರು

ಉಡುಪಿ: ಕಾಲೇಜು ವಿಧ್ಯಾರ್ಥಿನಿಯರಿಗೆ ಪ್ರತಿನಿತ್ಯ ಗುಪ್ತಾಂಗ ತೋರಿಸಿ ವಿಕೃತಿ ಮೆರೆಯುತ್ತಿದ್ದ ಖಾಸಗಿ ಬಸ್ ಕಂಡಕ್ಟರ್ ಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ, ಪೊಲೀಸ್ ವಶಕ್ಕೆ ನೀಡಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಹೆಬ್ರಿಯ ಹೆಸರಾಂತ ಖಾಸಗಿ ಬಸ್ ನ‌ ಕಂಡಕ್ಟರ್ ಉಪೇಂದ್ರ ಎಂಬಾತನೇ ಪ್ರಕರಣದ ಆರೋಪಿ. ಈತ ಸಂತೆಕಟ್ಟೆಯ ನರ್ಸಿಂಗ್ ಕಾಲೇಜ್ ಬಳಿ ತನ್ನ ಸ್ಕೂಟಿಯಲ್ಲಿ ಬಂದು ಅಲ್ಲಿನ ವಿದ್ಯಾರ್ಥಿನಿಯರಿಗೆ ಪ್ಯಾಂಟ್ ಜಿಪ್ ಜಾರಿಸಿ ಕಳೆದ ಕೆಲವು ದಿನಗಳಿಂದ ಗುಪ್ತಾಂಗ ತೋರಿಸುತ್ತಿದ್ದ. ಮಾತ್ರವಲ್ಲದೆ ಕೈಸನ್ನೆ, ಕಣ್ಣ್ ಸನ್ನೆ ಮಾಡುತ್ತ

ಉಡುಪಿ : ಜಿಪ್ ಜಾರಿಸಿ ಖಾಸಗಿ ಅಂಗ ತೋರಿಸುತ್ತಿದ್ದ ಕಂಡಕ್ಟರ್‌ನ ಕಾಮದ ಪಿತ್ತ ಇಳಿಸಿದ ನರ್ಸಿಂಗ್ ವಿದ್ಯಾರ್ಥಿನಿಯರು Read More »

ಉಳ್ಳಾಲ: ಹಿಟ್ & ರನ್ ಗೆ ಕೂಲಿ ಕಾರ್ಮಿಕ ಬಲಿ

ಉಳ್ಳಾಲ: ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ.66 ರ ಬೀರಿ ಎಂಬಲ್ಲಿ ನಡೆದಿದೆ. ಧಾರವಾಡ ಮೂಲದ ವಲಸೆ ಕಾರ್ಮಿಕ ಆನಂದ್ ಅಲಿಯಾಸ್ ಸಾಗರ್(28)ಸಾವನಪ್ಪಿದ ಯುವಕ. ಈತ ಸಂಕೋಳಿಗೆಯ ಎ.ಕೆ ಟ್ರೇಡರ್ಸ್ ಎಂಬ ಸಿಮೆಂಟ್ ಅಂಗಡಿಯಲ್ಲಿ ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದರು. ಅವರು ಶನಿವಾರ ರಾತ್ರಿ ಸ್ನೇಹಿತನ ಜೊತೆ ಬೀರಿಯ ಹೆದ್ದಾರಿ ಬದಿಯಲ್ಲಿರುವ ಠಿಕ್ಕ ಪಾಯಿಂಟ್ ಎಂಬ ರೆಸ್ಟೋರಂಟಿಗೆ ತೆರಳಿದ್ದರು. ಅಲ್ಲಿ ಠಿಕ್ಕ ಸವಿದು ಹಿಂತಿರುಗುತ್ತಿದ್ದ ವೇಳೆ ಅಪರಿಚಿತ

ಉಳ್ಳಾಲ: ಹಿಟ್ & ರನ್ ಗೆ ಕೂಲಿ ಕಾರ್ಮಿಕ ಬಲಿ Read More »

ಬೆಳ್ತಂಗಡಿ: ಇಳಂತಿಲದಲ್ಲಿ ಐದು ಗ್ರೆನೇಡ್ ಪತ್ತೆ! ಪೊಲೀಸರಿಂದ ಚುರುಕುಗೊಂಡ ತನಿಖೆ|

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿ ಐದು ಗ್ರೆನೇಡ್ ಪತ್ತೆಯಾಗಿದ್ದು, ನಿವೃತ್ತ ಸೈನಿಕರೊಬ್ಬರು ಇದನ್ನು ಪೊಲೀಸರ ಗಮನಕ್ಕೆ ತಂದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಳಂತಿಲ ಗ್ರಾಮದ ನಿವಾಸಿ ಜಯಕುಮಾರ್ ನಿವೃತ್ತ ಯೋಧರಾಗಿದ್ದು ಶನಿವಾರ ಸಂಜೆ 6 ಗಂಟೆ ವೇಳೆಗೆ ಉಪ್ಪಿನಂಗಡಿಯಿಂದ ತನ್ನ ಮನೆಗೆ ನಡೆದುಕೊಂಡು ತೆರಳುತ್ತಿದ್ದಾಗ ಗುಡ್ಡದ ಇಳಿಜಾರಿನಲ್ಲಿ ಗ್ರೆನೇಡ್ ಮಾದರಿಯ ಸ್ಫೋಟಕ ವಸ್ತು ಕಂಡು ಬಂದಿದೆ. ಅದರಲ್ಲಿ ಹಳದಿ ಬಣ್ಣದ ಪ್ಲಾಸ್ಟಿಕ್ ಕವರಿನಲ್ಲಿ ಒಂದು ಗ್ರೆನೇಡ್ ಇದ್ದು ಇತರ ನಾಲ್ಕು ಗ್ರೆನೇಡ್ ಗಳು ಸ್ಥಳದಲ್ಲೆ ಬಿದ್ದಿತ್ತು.

ಬೆಳ್ತಂಗಡಿ: ಇಳಂತಿಲದಲ್ಲಿ ಐದು ಗ್ರೆನೇಡ್ ಪತ್ತೆ! ಪೊಲೀಸರಿಂದ ಚುರುಕುಗೊಂಡ ತನಿಖೆ| Read More »

ಕೇದಾರನಾಥ ಆವರಣದಲ್ಲಿ ಶೂ ಧರಿಸಿ ಓಡಾಡಿದ‌ ಪ್ರಧಾನಿ ಮೋದಿ| ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ|

ನವದೆಹಲಿ: ನವೆಂಬರ್ 5 ರಂದು ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರಲ್ಲದೆ 12 ಅಡಿಗಳಷ್ಟು ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಉದ್ಘಾಟಿಸಿದ್ದರು. ಈ ಭೇಟಿ ಸಂದರ್ಭದ ಫೋಟೋಗಳು, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ಮೋದಿ, ಬಿಜೆಪಿ ಅಭಿಮಾನಿಗಳು ಪ್ರಚಾರಾರ್ಥ ಈ ಚಿತ್ರಗಳನ್ನು ಹಂಚಿಕೊಂಡರೆ, ವಿರೋಧಿ ಪಾಳೆಯದವರು ಈ ಶೋ ಆಫ್ ಬೇಕಿತ್ತಾ ಎನ್ನುವ ಅರ್ಥದಲ್ಲಿ ಈ ಚಿತ್ರಗಳನ್ನು ಹಂಚಿಕೊಂಡು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಲ್ಲಕ್ಕಿಂತ ಅಚ್ಚರಿ ಎಂದರೆ

ಕೇದಾರನಾಥ ಆವರಣದಲ್ಲಿ ಶೂ ಧರಿಸಿ ಓಡಾಡಿದ‌ ಪ್ರಧಾನಿ ಮೋದಿ| ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ| Read More »

ಅಡಿಕೆ ಕದ್ದ ನೆಪದಲ್ಲಿ ಬಾಲಕನಿಗೆ ಹಿಗ್ಗಾಮುಗ್ಗ ಹಲ್ಲೆ ಪ್ರಕರಣ| ಆರೋಪಿಗಳಿಗೆ ಜಾಮೀನು ದಯಪಾಲಿಸಿದ ಕೋರ್ಟ್..!

ಪುತ್ತೂರು: ಅಡಿಕೆ ಕದ್ದ ನೆಪದಲ್ಲಿ ಗುತ್ತಿಗಾರಿನ 16 ವರ್ಷದ ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಆಕ್ರೋಶ ಕೇಳಿಬಂದಿದ್ದರಿಂದ ಸುಬ್ರಹ್ಮಣ್ಯ ಠಾಣೆಯ ಪೊಲೀಸರು ಮೊದಲಿಗೆ ಸುಮೊಟೊ ಕೇಸು ದಾಖಲಿಸಿದ್ದರು. ಆನಂತರ, ಸ್ವತಃ ಬಾಲಕನೇ ಹೆತ್ತವರ ಜೊತೆಗೆ ಬಂದು ಠಾಣೆಯಲ್ಲಿ ದೂರು ದಾಖಲಿಸಿದ್ದ. ಗುತ್ತಿಗಾರಿನ ಕಡ್ತಲ್ ಕಜೆ ಎಂಬಲ್ಲಿ ಅ.27ರಂದು ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ಹಣ್ಣಡಿಕೆಯನ್ನು ಗೋಣಿಯಲ್ಲಿ ತುಂಬಿಸಿ ಒಯ್ಯುತ್ತಿದ್ದ ಬಾಲಕನನ್ನು, ಆತ ಕದ್ದು ತಂದ

ಅಡಿಕೆ ಕದ್ದ ನೆಪದಲ್ಲಿ ಬಾಲಕನಿಗೆ ಹಿಗ್ಗಾಮುಗ್ಗ ಹಲ್ಲೆ ಪ್ರಕರಣ| ಆರೋಪಿಗಳಿಗೆ ಜಾಮೀನು ದಯಪಾಲಿಸಿದ ಕೋರ್ಟ್..! Read More »

ಪುತ್ತೂರು: ಮೀನು ಹಿಡಿಯಲು ಹೋದ ಯುವಕ ಕೆರೆಪಾಲು

ಪುತ್ತೂರು: ಮೀನು ಹಿಡಿಯಲೆಂದು‌‌ ಸ್ನೇಹಿತರ ಜೊತೆ ಹೋದ ಯುವಕನೊಬ್ಬ ಕೆರೆಯಲ್ಲಿ ಮುಳುಗಿ‌ ಸಾವನ್ನಪ್ಪಿದ ಘಟನೆ ಬೆಳ್ಳಾರೆಯಿಂದ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಪುತ್ತೂರು ಸಂಪ್ಯದ ಮೂಲೆ ನಿವಾಸಿ ಸುಂದರ ಅವರ ಪುತ್ರ ಅವಿನಾಶ್ (23ವ) ಎಂದು ಗುರುತಿಸಲಾಗಿದೆ. ಈತ ಬೆಳ್ಳಾರೆಯ ಮೊಗಪ್ಪೆ ಕೆರೆಯಲ್ಲಿ ಮೀನು ಹಿಡಯಲೆಂದು ಸ್ನೇಹಿತರೊಂದಿಗೆ ತೆರಳಿದ್ದು, ಬಳಿಕ ಕೆರೆಯಲ್ಲಿ ಕಣ್ಮರೆಯಾಗಿರುವುದಾಗಿ ಹೇಳಲಾಗಿದೆ. ಬಳಿಕ ಪುತ್ತೂರು ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಅವಿನಾಶ್ ಅವರ ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು: ಮೀನು ಹಿಡಿಯಲು ಹೋದ ಯುವಕ ಕೆರೆಪಾಲು Read More »

ಅಪ್ರಾಪ್ತೆಯ ಮೇಲೆ ಎರಗಿದ ಕಾಮಾಂಧರು| ಮೂವರು ಅರೆಸ್ಟ್

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಬಾಲಕಿಯ ತಾಯಿ ದೂರು ನೀಡಿದ್ದು ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತೆ ಬಾಲಕಿಯ ತಾಯಿ ದೂರು ನೀಡಿದ ಆಧಾರದಲ್ಲಿ ರಿಕ್ಷಾ ಚಾಲಕ ರಿಜ್ವಾನ್ ಎಂದು ಗುರುತಿಸಲಾಗಿದ್ದು ವ್ಯಕ್ತಿಯನ್ನು ದಸ್ತಗಿರಿಗೊಳಪಡಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ. ಇಷ್ಟು ಮಾತ್ರವಲ್ಲದೇ ಅದೇ ಬಾಲಕಿಯು ತನ್ನ ತಾಯಿಯೊಂದಿಗೆ ಹಾಜರಾಗಿ ಸುಮಾರು 5 ತಿಂಗಳ ಹಿಂದೆ ಇಬ್ಬರು ಯುವಕರು ಪರಿಚಿತರಾಗಿ ತನ್ನನ್ನು

ಅಪ್ರಾಪ್ತೆಯ ಮೇಲೆ ಎರಗಿದ ಕಾಮಾಂಧರು| ಮೂವರು ಅರೆಸ್ಟ್ Read More »