ಹಾವೇರಿ: ಆನ್ಲೈನ್ ಕ್ಲಾಸ್ ನೆಪದಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ವಾಟ್ಸ್ ಆಪ್ ನಲ್ಲಿ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ರಾಣೆಬೆನ್ನೂರು ತಾಲೂಕು ದೇವರಗುಡ್ಡ ಸರ್ಕಾರಿ ಶಾಲೆಯ ಶಿಕ್ಷಕ ಮಲ್ಲಪ್ಪ ತಳವಾರ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. ಈತ ಆನ್ ಲೈನ್ ಕ್ಲಾಸ್ ನೆಪದಲ್ಲಿ ವಿದ್ಯಾರ್ಥಿನಿಯ ಮೊಬೈಲ್ ನಂಬರ್ ಪಡೆದು ವಾಟ್ಸ್ ಆಪ್ ಮೂಲಕ ಚಾಟ್ ಮಾಡುತ್ತಿದ್ದ.
ಕಿಸ್ ಕೊಡು ಅಂತ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಕಾಮುಕ ಶಿಕ್ಷಕನ ವಾಟ್ಸ್ ಅಪ್ ಸಂದೇಶದ ಸ್ಕ್ರೀನ್ ಶಾಟ್ ವೈರಲ್ ಆಗುತ್ತಿದ್ದಂತೆ ಆಕ್ರೋಶಗೊಂಡ ಗ್ರಾಮಸ್ಥರು, ಆತನ ಬಂಧನಕ್ಕೆ ಆಗ್ರಹಿಸಿದ್ದಾರೆ. ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ್ದಾರೆ. ಸದ್ಯ, ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿದ್ದು ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.