Ad Widget .

ದೇಶದಲ್ಲಿ ರೂಪಾಂತರಿ ಒಮಿಕ್ರಾನ್ ವೈರಸ್ ಪತ್ತೆ| ಕರ್ನಾಟಕದ ಇಬ್ಬರಲ್ಲಿ ಸೋಂಕು ದೃಢ|

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನವದೆಹಲಿ: ದೇಶದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದ ಕೊರೊನಾ ಹೊಸ ರೂಪಾಂತರಿ ವೈರಸ್ ‘ಒಮಿಕ್ರಾನ್’ ರಾಜ್ಯದಲ್ಲಿ ಇಬ್ಬರಲ್ಲಿ ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಇಲಾಖೆ ದೃಢಪಡಿಸಿದೆ.

Ad Widget . Ad Widget . Ad Widget .

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಈ ಮಾಹಿತಿ ನೀಡಿದ್ದು, ಭಾರತದಲ್ಲಿಯೇ ಮೊದಲ ಒಮಿಕ್ರಾನ್ ಕೇಸ್ ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಆಫ್ರಿಕಾದಿಂದ ಬಂದಿದ್ದ ಇಬ್ಬರಲ್ಲಿ ಹೊಸ ರೂಪಾಂತರಿ ತಳಿ ಪತ್ತೆಯಾಗಿದೆ ಎಂದರು.

66 ವರ್ಷದ ವೃದ್ಧ ಹಾಗೂ 46 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಕರ್ನಾಟಕದ ಮೂಲಕವೇ ಭಾರತಕ್ಕೆ ಒಮಿಕ್ರಾನ್ ಎಂಟ್ರಿಯಾಗಿದ್ದಾಗಿ ತಿಳಿಸಿದ್ದಾರೆ.

ಆಘಾತಕಾರಿ ಸಂಗತಿಯೆಂದರೆ ಈ ಹಿಂದೆ ಕರ್ನಾಟಕದಲ್ಲಿಯೇ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿತ್ತು. ಅಲ್ಲದೇ ಕೊರೊನಾದ ಮೊದಲ ಸಾವು ಕೂಡಾ ಕರ್ನಾಟಕದಲ್ಲೇ ಸಂಭವಿಸಿತ್ತು. ಇದೀಗ‌ ಮತ್ತೆ ಕರ್ನಾಟಕದಲ್ಲಿ ಪತ್ತೆಯಾದ ಓಮಿಕ್ರಾನ್ ನಿಂದ ಜನತೆ ಆತಂಕ ಪಡುವಂತಾಗಿದೆ.

ಕರ್ನಾಟಕದಲ್ಲಿ ಪತ್ತೆಯಾಗಿರುವ ಒಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕೂಡ ಕ್ವಾರಂಟೈನ್ ಮಾಡಲಾಗಿದೆ. ಈ ವೈರಸ್ ಹೇಗೆ ಬರಲಿದೆ ಅಂತ ಅಧ್ಯಯನ ಮಾಡಲಾಗಿದೆ. ಬೇರೆ ಬೇರೆ ದೇಶದಲ್ಲಿ ಈಗಾಗಲೇ ಒಮಿಕ್ರಾನ್ ಕಾಣಿಸಿಕೊಂಡಿದೆ. ಕರ್ನಾಟಕದಲ್ಲಿ ಇಬ್ಬರಿಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿದ್ದರೂ ಅವರಲ್ಲಿ ವೈರಸ್​ ತೀವ್ರವಾಗಿಲ್ಲ. ಇಬ್ಬರನ್ನೂ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೆಂಗಳೂರಿನಲ್ಲಿ ಸಚಿವ ಡಾ.ಅಶ್ವತ್ಥ್​ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.

Leave a Comment

Your email address will not be published. Required fields are marked *