Ad Widget .

ಮಡಿಕೇರಿ: ಕಾರಿನ ಮೇಲೆ ಕಾಡಾನೆ ದಾಳಿ| ಪ್ರಯಾಣಿಕರು ಅದೃಷ್ಟವಶಾತ್ ಪಾರು|

Ad Widget . Ad Widget .

ಮಡಿಕೇರಿ: ಕುಶಾಲನಗರದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರಿನ ಮೇಲೆ ಕಾಡಾನೆಯೊಂದು ದಾಳಿ ಮಾಡಿರುವ ಘಟನೆ ಆನೆಕಾಡು ಎಂಬಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮೂವರು ಮಕ್ಕಳು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

Ad Widget . Ad Widget .

ಪ್ರವಾಸಿತಾಣ ನಿಸರ್ಗಧಾಮ ವೀಕ್ಷಣೆಗೆ ಕುಶಾಲನಗರಕ್ಕೆ ತೆರಳಿದ್ದ ಕುಟುಂಬ ಮಡಿಕೇರಿ ಕಡೆಗೆ ಪ್ರಯಾಣ ಬೆಳೆಸಿತ್ತು. ರಾತ್ರಿ ಸುಮಾರು 8 ಗಂಟೆ ಹೊತ್ತಿನಲ್ಲಿ ಕಾಡಾನೆ ದಿಢೀರ್ ಆಗಿ ಹೆದ್ದಾರಿಯಲ್ಲಿ ಪ್ರತ್ಯಕ್ಷವಾಗಿದೆ. ಕಾರನ್ನು ನಿಧಾನವಾಗಿ ಚಲಾಯಿಸಲಾಯಿತ್ತಾದರೂ ಕಾಡಾನೆ ಸಮೀಪಕ್ಕೆ ಬಂದಾಗಿತ್ತು. ಮಡದಿ, ಮಕ್ಕಳು ಆತಂಕದಿಂದ ಜೋರಾಗಿ ಕಿರುಚಿಕೊಳ್ಳಲು ಆರಂಭಿಸಿದರು. ದೂರದಲ್ಲಿ ಬೈಕ್ ನಲ್ಲಿ ಬರುತ್ತಿದ್ದವರು ವೇಗವಾಗಿ ಬರುವಂತೆ ಸನ್ನೆ ಮಾಡಿದ್ದಾರೆ. ಅಷ್ಟೊತ್ತಿಗಾಗಲೇ ಕಾಡಾನೆ ತನ್ನ ದಂತದಿಂದ ಕಾರನ್ನು ಮಗುಚಲು ಯತ್ನಿಸಿದೆ.

ಕಾರನ್ನು ವೇಗವಾಗಿ ಚಲಾಯಿಸಿ ಪ್ರಾಣಾಪಾಯದಿಂದ ಪಾರಾಗುವಲ್ಲಿ ಕುಟುಂಬ ಯಶಸ್ವಿಯಾಯಿತ್ತಾದರೂ ಆನೆ ಸ್ವಲ್ಪ ದೂರ ಹಿಂಬಾಲಿಸಿ ಆತಂಕವನ್ನು ಸೃಷ್ಟಿಸಿತು. ಹೇಗೋ ಜೀವ ಉಳಿಸಿಕೊಂಡು ಮಡಿಕೇರಿ ತಲುಪಿದ ಕುಟುಂಬ ನೆಮ್ಮದಿಯ ನಿಟ್ಟುಸಿರು ಬಿಟ್ಟಿತು. ದಂತದಿಂದ ತಿವಿದ ಪರಿಣಾಮ ಕಾರಿನ ಒಂದು ಭಾಗ ಜಖಂ ಗೊಂಡಿದೆ.

Leave a Comment

Your email address will not be published. Required fields are marked *