ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್ವುಡ್ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಶಿವರಾಂ ಇಂದು ವಿಧಿವಶಯಾಗಿದ್ದರೆ.
ಕೆಲವು ದಿನಗಳಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡುಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಶಿವರಾಂ ಅವರಿಗೆ 84 ವರ್ಷ ವಯಸ್ಸಾಗಿತ್ತು. ಆರು ದಶಕಗಳಿಂದ ಕನ್ನಡ ಸಿನಿಮಾ ರಂಗದ ನಂಟುಹೊಂದಿದ್ದಾರೆ. ಪುಟ್ಟಣ್ಣ ಕಣಗಾಲ್ ಗರಡಿಯಲ್ಲಿ ಪಳಗಿದ ಶಿವರಾಮ್, ನಾಯಕನಟರಾಗಿ, ಹಾಸ್ಯನಟ, ಪೋಷಕ ನಟ, ನಿರ್ಮಾಪಕರಾಗಿಯೂ ಹೆಸರು ಮಾಡಿದವರು. ಶರಪಂಜರ’ ಶಿವರಾಂ ಎಂದೇ ಹೆಸರುವಾಸಿಯಾಗಿದ್ದರು
ಡ್ರೈವರ್ ಹನುಮಂತು’ ಸಿನಿಮಾದಲ್ಲಿ ನಾಯಕ ನಟರಾಗಿ ಹೆಚ್ಚು ಜನಪ್ರಿಯರಾಗಿದ್ದರು. ಡಾ.ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಪ್ರಣಯರಾಜ ಶ್ರೀನಾಥ್ ಅವರ ಜೊತೆಯಲ್ಲಿ ನಟಿಸಿದ್ದರು.