Ad Widget .

ಬೆಂಗಳೂರು : ನಾಪತ್ತೆಯಾಗಿದ್ದ ದಕ್ಷಿಣ ಆಫ್ರಿಕಾದ 10 ಮಂದಿ ಪ್ರಯಾಣಿಕರಲ್ಲಿ 9 ಮಂದಿ ಪತ್ತೆ

ಬೆಂಗಳೂರು : ಕೊರೊನಾ ರೂಪಾಂತರಿ ಒಮಿಕ್ರಾನ್ (Omicron)ಸೋಂಕು ದಕ್ಷಿಣ ಆಫ್ರಿಕಾದಲ್ಲಿ ಮೊದಲು ಕಾಣಿಸಿಕೊಂಡ ಬಳಿಕ ಅಲ್ಲಿಂದ ಬೆಂಗಳೂರಿಗೆ ಬಂದಿದ್ದ 10 ಮಂದಿ ಪ್ರಯಾಣಿಕರು ನಾಪತ್ತೆಯಾಗಿದ್ದರು. ಇದೀಗ ಬಿಬಿಎಂಪಿ ಸಿಬ್ಬಂದಿ 9 ಮಂದಿಯನ್ನು ಪತ್ತೆ ಹಚ್ಚಿದ್ದಾರೆ.

Ad Widget . Ad Widget .

ಒಮಿಕ್ರಾನ್ ಸೋಂಕಿನ ಆತಂಕದ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ವಿದೇಶದಿಂದ ಬಂದವರಿಗೆ ಕೋವಿಡ್ ಟೆಸ್ಟ್ ನಡೆಸಲಾಗುತ್ತಿದೆ. ಈ ವೇಳೆ ದಕ್ಷಿಣ ಆಫ್ರಿಕಾದಿಂದ ಬಂದಿದ್ದ 10 ಮಂದಿ ಪ್ರಯಾಣಿಕರು ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ 10 ಮಂದಿ ಪ್ರಯಾಣಿಕರ ಪೈಕಿ ಇದೀಗ ಪೊಲೀಸ್ ಇಲಾಖೆಯ ಸಹಾಯದಿಂದ 9 ಪ್ರಯಾಣಿಕರನ್ನು ಬಿಬಿಎಂಪಿ ಪತ್ತೆ ಮಾಡಿದೆ. ಬಳಿಕ ಮುಂದಿನ ಕ್ರಮ ಕೈಗೊಂಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *