Ad Widget .

ಕೊರೊನಾ ಹೆಚ್ಚಾದ್ರೆ ಮತ್ತೆ ಶಾಲೆ ಬಂದ್| ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿಕೆ|

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಕಾಲಿಟ್ಟ ನಂತರ, ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸಲು ಹಿಂದೆ ಮುಂದೆ ನೋಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕೊರೋನಾ ಹೆಚ್ಚಾದರೆ ಶಾಲೆ ಬಂದ್ ಮಾಡಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

Ad Widget . Ad Widget .

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಕೊರೋನಾ ಸೋಂಕಿನ ತೀವ್ರತೆ ಬಗ್ಗೆ ತಜ್ಞರಿಂದ ಪ್ರತಿ ದಿನ ವರದಿಯನ್ನು ಪಡೆಯುತ್ತಿದ್ದೇವೆ. ಕೋವಿಡ್ ತೀವ್ರತೆಯನ್ನು ಆಧರಿಸಿ, ಶಾಲಾ-ಕಾಲೇಜು ಮುಚ್ಚುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

Ad Widget . Ad Widget .

ಸದ್ಯಕ್ಕೆ ತಜ್ಞರು ನೀಡುತ್ತಿರುವಂತ ವರದಿಯ ಪ್ರಕಾರ ಯಾರೂ ಆತಂಕ ಪಡುವಂತೆ ಕೊರೋನಾ ತೀವ್ರತೆ ಇಲ್ಲ. ಕೊರೋನಾ ತೀವ್ರತೆ ಆಧರಿಸಿ, ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ವಸತಿ ಶಾಲೆಗಳಲ್ಲಿ ಕೊರೋನಾ ಹೆಚ್ಚಾದ ಬಗ್ಗೆ ಗಮನಕ್ಕೆ ಬಂದಿದೆ. ಆ ಬಗ್ಗೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ರಾಜ್ಯದಲ್ಲಿ ಸದ್ಯಕ್ಕೆ ಕೊರೋನಾ ತೀವ್ರತೆ ಇಲ್ಲ. ಪೋಷಕರು ಆತಂಕ ಪಡಬಾರದು ಎಂದಿದ್ದಾರೆ.

Leave a Comment

Your email address will not be published. Required fields are marked *