Ad Widget .

ಪುತ್ತೂರು: ಹಿರಿಯ ಬಿಜೆಪಿ ನೇತಾರ ಉರಿಮಜಲು ರಾಮಭಟ್ ಇನ್ನಿಲ್ಲ

ಪುತ್ತೂರು: ಕರಾವಳಿಯ ಹಿರಿಯ ರಾಜಕಾರಣಿ, ಬಿಜೆಪಿ ನೇತಾರ, ಮಾಜಿ ಶಾಸಕ 92 ರ ಹರೆಯದ ಉರಿಮಜಲು ರಾಮ್‌ ಭಟ್ ಅಸ್ತಂಗತರಾಗಿದ್ದಾರೆ. ಅವರ ಆರೋಗ್ಯದಲ್ಲಿ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Ad Widget . Ad Widget .

ರಾಮ್ ಭಟ್ ಅವರು ಕಳೆದ ಕೆಲವು ವರ್ಷಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಅವರ ಆರೋಗ್ಯವು ಸ್ಥಿರವಾಗಿತ್ತು‌ ಎಂದು ಆಸ್ಪತ್ರೆ ಮೂಲಗಳು ತಿಳಿಸಿದ್ದರೂ, ಇಂದು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.

Ad Widget . Ad Widget .

ಕೆಲವು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಕೊಂಚ ಚೇತರಿಸಿಕೊಂಡು ಪುತ್ತೂರಿನ ತಮ್ಮ ನಿವಾಸಕ್ಕೆ ಹಿಂತಿರುಗಿದ್ದರು. ಕರಾವಳಿ ರಾಜಕಾರಣದ ಭೀಷ್ಮ ಎಂದೇ ಕರೆಯಲ್ಪಡುತ್ತಿದ್ದ ಪ್ರಖಂಡ ರಾಜಕಾರಣಿಯ ಅಗಲುವಿಕೆ ಬಿಜೆಪಿ ಹಾಗೂ ಸಂಘಪರಿವಾರಕ್ಕೆ ತುಂಬಲಾರದ ನಷ್ಟವಾಗಿದೆ.

Leave a Comment

Your email address will not be published. Required fields are marked *