ಪುತ್ತೂರು: ಕರಾವಳಿಯ ಹಿರಿಯ ರಾಜಕಾರಣಿ, ಬಿಜೆಪಿ ನೇತಾರ, ಮಾಜಿ ಶಾಸಕ 92 ರ ಹರೆಯದ ಉರಿಮಜಲು ರಾಮ್ ಭಟ್ ಅಸ್ತಂಗತರಾಗಿದ್ದಾರೆ. ಅವರ ಆರೋಗ್ಯದಲ್ಲಿ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಾಮ್ ಭಟ್ ಅವರು ಕಳೆದ ಕೆಲವು ವರ್ಷಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಅವರ ಆರೋಗ್ಯವು ಸ್ಥಿರವಾಗಿತ್ತು ಎಂದು ಆಸ್ಪತ್ರೆ ಮೂಲಗಳು ತಿಳಿಸಿದ್ದರೂ, ಇಂದು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.
ಕೆಲವು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಕೊಂಚ ಚೇತರಿಸಿಕೊಂಡು ಪುತ್ತೂರಿನ ತಮ್ಮ ನಿವಾಸಕ್ಕೆ ಹಿಂತಿರುಗಿದ್ದರು. ಕರಾವಳಿ ರಾಜಕಾರಣದ ಭೀಷ್ಮ ಎಂದೇ ಕರೆಯಲ್ಪಡುತ್ತಿದ್ದ ಪ್ರಖಂಡ ರಾಜಕಾರಣಿಯ ಅಗಲುವಿಕೆ ಬಿಜೆಪಿ ಹಾಗೂ ಸಂಘಪರಿವಾರಕ್ಕೆ ತುಂಬಲಾರದ ನಷ್ಟವಾಗಿದೆ.

















