Ad Widget .

ನಾಳೆಯಿಂದ 3 ದಿನ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್| ಎಣ್ಣೆ ಪ್ರಿಯರಿಗೆ ಬಿಗ್ ಶಾಕ್!

ಬೆಂಗಳೂರು: ಡಿಸೆಂಬರ್ 10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ಗಳನ್ನು ಮುಚ್ಚುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಬರೋಬ್ಬರಿ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದಿರುವುದು ಮದ್ಯಪ್ರಿಯರಿಗೆ ಶಾಕ್ ನೀಡಿದೆ.

Ad Widget . Ad Widget .

ಮುಖ್ಯ ಚುನಾವಣಾಧಿಕಾರಿಗಳ ಈ ಸೂಚನೆಯನ್ನು ರಾಜ್ಯಾದ್ಯಂತ ಮದ್ಯ ಮಾರಾಟಗಾರರು ಖಂಡಿಸಿದ್ದಾರೆ. ಡಿಸೆಂಬರ್ 8 ರಿಂದ ಡಿಸೆಂಬರ್ 10 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ಬಂದ್ ನಿಂದ ಭಾರೀ ನಷ್ಟವಾಗಲಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

Ad Widget . Ad Widget .

25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ 10ರಂದು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಡಿ.10ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಡಿಸೆಂಬರ್ 14ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರ ಬೀಳಲಿದೆ.

Leave a Comment

Your email address will not be published. Required fields are marked *