Ad Widget .

ಚಂಪಾಷಷ್ಟಿ ಹಿನ್ನಲೆ| ಕುಕ್ಕೆಯಲ್ಲಿ ಎರಡು ದಿನ‌ ಮದ್ಯ ಮಾರಾಟ ಬಂದ್ ಗೆ ಡೀಸಿ ಆದೇಶ|

Ad Widget . Ad Widget .

ಮಂಗಳೂರು: ಪ್ರಸಿದ್ದ ಯಾತ್ರಾ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವ ಪ್ರಯುಕ್ತ ಡಿ. 10ರ ವರೆಗೆ ನಡೆಯಲಿರುವ ರಥೋತ್ಸವಗಳ ಸಮಯದಲ್ಲಿ ಅಪಾರ ಭಕ್ತಾದಿಗಳು ಸೇರಲಿದ್ದಾರೆ.

Ad Widget . Ad Widget .

ಈ ಹಿನ್ನಲೆಯಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯದ ಪರಿಸರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿಯವರು ಕರ್ನಾಟಕ ಅಬಕಾರಿ ಕಾಯಿದೆ 1965 ರ ಸೆಕ್ಷನ್ 21 (1) ರ ಅಡಿಯಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂಜಾಡಿ ಬಳಿಯಿರುವ ಪ್ರಶಾಂತ್ ಬಾರ್ ಆಂಡ್ ರೆಸ್ಟೋರೆಂಟ್ ಮತ್ತು ಬೆಳ್ಳಿ ಬಾರ್ ಅಂಡ್ ರೆಸ್ಟೋರೆಂಟ್ ಅನ್ನು ಡಿ. 08ರ ಬೆಳಿಗ್ಗೆ 06 ಗಂಟೆಯಿಂದ ಡಿ. 09 ರ ಮಧ್ಯರಾತ್ರಿ 12 ಗಂಟೆಯವರೆಗೆ ಮುಚ್ಚುವಂತೆ ಸೂಚಿಸಿದ್ದಾರೆ.

Leave a Comment

Your email address will not be published. Required fields are marked *