Ad Widget .

ನೈಟ್ ಕರ್ಪ್ಯೂ, ಶಾಲೆಗಳ ಬಂದ್ ಸದ್ಯಕ್ಕಿಲ್ಲ| ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ಕೊರೊನಾ ರೂಪಾಂತರಿ ತಳಿ ಓಮಿಕ್ರಾನ್ ಕುರಿತು ಜನರು ಆತಂಕಗೊಳ್ಳುವ ಅವಶ್ಯಕತೆ ಇಲ್ಲ. ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸದ್ಯಕ್ಕೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವುದಿಲ್ಲ. ವಾರದ ಬಳಿಕ ಈ ಕುರಿತು ಪರಿಸ್ಥಿತಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Ad Widget . Ad Widget .

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು ನೈಟ್ ಕರ್ಫ್ಯೂ ಸದ್ಯಕ್ಕಿಲ್ಲ, ಒಂದು ವಾರದ ಬಳಿಕ ನಿರ್ಧಾರ ಮಾಡಲಾಗುವುದು. ನರ್ಸಿಂಗ್ ವಿದ್ಯಾರ್ಥಿಗಳಿಗೆ ಎರಡು ಡೋಸ್ ಕಡ್ಡಾಯ. ಕ್ರಿಸ್ಮಸ್, ಹೊಸ ವರ್ಷಕ್ಕೆ ಒಂದು ವಾರ ನೋಡಿಕೊಂಡು ಕೆಲ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

Ad Widget . Ad Widget .

ಜನರು ಗಾಬರಿಗೊಳ್ಳುವ ಅವಶ್ಯಕತೆ ಇಲ್ಲ. ಹಾಸ್ಟೆಲ್‌ಗಳಿಗೆ ಈಗಾಗಲೇ ಮಾರ್ಗಸೂಚಿ ಹೊರಡಿಸಿದ್ದೇವೆ. ವಾರ್ಡನ್, ಅಡುಗೆಯವರಿಗೆ ಎರಡು ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡಿರಬೇಕು. ವ್ಯಾಕ್ಸಿನ್ ಡ್ರೈವ್ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಗಡಿ ಭಾಗದಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದೆ ಎಂದರು.

ಸಂಪುಟ ಸಭೆಯ ನಂತರ ಶಾಲೆಗಳ ಪರಿಸ್ಥಿತಿ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಬಿ ಸಿ ನಾಗೇಶ್, ಯಾವುದೇ ಕಾರಣಕ್ಕೂ ಶಾಲೆಗಳನ್ನು ಮುಚ್ಚುವುದಿಲ್ಲ, ಪರೀಕ್ಷೆಗಳು ಎಂದಿನಂತೆ ನಡೆಯುತ್ತಿದೆ. ಶಾಲೆಗಳಲ್ಲಿ ಹಿಂದಿನ ಮಾರ್ಗಸೂಚಿಯೇ ಮುಂದುವರಿಯಲಿದೆ. ಹೊಸದಾಗಿ ಜಾರಿಗೆ ತರುವುದಿಲ್ಲ. ವಸತಿ ಶಾಲೆಗಳು ಮತ್ತು ಹಾಸ್ಟೆಲ್ ಗಳಲ್ಲಿ ವಿಶೇಷ ಗಮನ ನೀಡುತ್ತೇವೆ ಎಂದರು.

Leave a Comment

Your email address will not be published. Required fields are marked *