ಬೆಂಗಳೂರು : ಕೊರೊನಾ ರೂಪಾಂತರ ಒಮಿಕ್ರಾನ್ ಸೋಂಕಿನ ಆತಂಕ ಮತ್ತು ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ನಡೆಯಲಿದ್ದು, ಸಭೆಯಲ್ಲಿ ಕೋವಿಡ್ ಸ್ಥಿತಿಗತಿ ಚರ್ಚೆಯ ಬಳಿಕ ಕೋವಿಡ್ ನಿಯಂತ್ರಣದ ಹೊಸ ನಿಯಮಗಳನ್ನು ಜಾರಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಬುಧವಾರ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ, ಕೋವಿಡ್ ನಿರ್ವಹಣೆ ಹಾಗೂ ಮಾರ್ಗಸೂಚಿ ರೂಪಿಸುವ ಬಗ್ಗೆ ಸಚಿವ ಸಂಪುಟದ ಸದಸ್ಯರ ಜತೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಒಂದು ವೇಳೆ ರಾತ್ರಿ ಕರ್ಫ್ಯೂ ವಿಧಿಸುವ ಅಗತ್ಯವಿದ್ದರೆ ವಿಧಿಸುತ್ತೇವೆ. ಕೋವಿಡ್ ಸ್ಥಿತಿಗತಿಗೆ ಅನುಗುಣವಾಗಿ ರಾಜ್ಯಾದ್ಯಂತ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.