ಬೆಳ್ತಂಗಡಿ: ನಾಲ್ಕನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ಯುವಕನೋರ್ವ ಅತ್ಯಾಚಾರ ನಡೆಸಿದ್ದು, ಆರೋಪಿಯನ್ನು ಬಂಧಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.
ಆರೋಪಿ ಜಯಾನಂದ ಎಂಬಾತ ಬಾಲಕಿಯನ್ನು ನಿರ್ಮಾಣ ಹಂತದಲ್ಲಿರುವ ಮನೆಗೆ ಕರೆದೊಯ್ದು ಬೆದರಿಸಿ ಅತ್ಯಾಚಾರವೆಸಗಿದ್ದು, ಬಳಿಕ ಬಾಲಕಿಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿಯ ಪೋಷಕರು ಅರೋಪಿಸಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಜಯಾನಂದ ಎಂಬಾತನನ್ನು ಪೋಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ