ಬೆಳಗಾವಿ: ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದ್ದು, ಪದ್ಮಶ್ರೀ ಪ್ರಶಸ್ತಿಗೂ ಹೆಸರು ಶಿಫಾರಸ್ಸು ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ಮೊದಲ ದಿನದ ಅಧಿವೇಶನದ ಸಂದರ್ಭದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸುತ್ತಾ ಮಾತನಾಡಿದಂತ ಅವರು, ನಟ ಪುನೀತ್ ರಾಜ್ ಕುಮಾರ್ ಅವರಿಗೆ ಅವರೇ ಸರಿ ಸಾಟಿ. ಅವರಿಗೆ ಮತ್ತೊಬ್ಬರು ಸರಿಸಾಟಿಯಿಲ್ಲ. ಸರ್ಕಾರ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸಿದೆ. ಈ ಪ್ರಶಸ್ತಿ ನೀಡಲು ಶೀಘ್ರವೇ ದಿನಾಂಕ ನಿಗದಿ ಪಡಿಸಿ, ಘೋಷಿಸಲಾಗುತ್ತದೆ ಎಂದರು.
ಇನ್ನೂ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ಪ್ರಶಸ್ತಿ ಅಷ್ಟೇ ಅಲ್ಲ, ಪದ್ಮಶ್ರೀ ಪ್ರಶಸ್ತಿಯನ್ನು ನೀಡುವಂತೆ ರಾಜ್ಯ ಸರ್ಕಾರ ಹಾಗೂ ಅವರ ಅಭಿಮಾನಿಗಳು, ಕರುನಾಡಿನ ಕೋರಿಕೆಯಾಗಿದೆ. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಲಿದೆ. ಪದ್ಮಶ್ರೀ ನೀಡುವ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದರು.