ಬಂಟ್ವಾಳ: ಹಾಡುಹಗಲೇ ಮುಸ್ಲಿಂ ಮಹಿಳೆಯೊಬ್ಬರ ಮನೆಯೊಳಗೆ ನುಗ್ಗಿ ಆಕೆಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಘಟನೆ ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ ನಡೆದಿದೆ. ಘಟನೆಯ ವೀಡಿಯೋ ಇದೀಗ ವೈರಲ್ ಆಗಿದೆ.
ಹಲ್ಲೆಗೊಳಗಾದ ಮಹಿಳೆ ಶಹನಾಜ್ ಅಬ್ದುಲ್ ರಹಿಮಾನ್ ಎಂಬವರ ಜೊತೆ ಮಾತನಾಡುತ್ತಿದ್ದ ವೇಳೆ ಇಬ್ಬರು ಮಹಿಳೆ ಮತ್ತು ಕೆಲವು ಯುವಕರು ಸೇರಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ.
ಆರೋಪಿಗಳಾದ ಹಸೀನಾ ಹಾಗೂ ಅಪ್ರೀದ್ ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿ ಪೈಪ್ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಮಹಿಳೆಯ ಮೇಲೆ ಯಾವುದೋ ವೈಯಕ್ತಿಕ ಸಿಟ್ಟಿನಲ್ಲಿ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಹಲ್ಲೆ ನಡೆಸಿದ ಮಹಿಳೆ ಮತ್ತು ಯುವಕರು ಆಕೆಯ ಸಂಬಂಧಿಕರೇ ಎನ್ನಲಾಗುತ್ತಿದೆ. ಪೊಲೀಸರು ಅಬ್ದುಲ್ ರಹಿಮಾನ್ ರವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.