ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಮೂವರು ಅತ್ಯಾಚಾರ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಮಂಗಳೂರು ಮೂಲದ ಇಬ್ಬರು ಹಾಗೂ ಕೇರಳ ಮೂಲದ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಮುಡಿಪು ಹತ್ತಿರದ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಗೊಂದಲಮಯ ವಾತಾವರಣ ನಿರ್ಮಾಣವಾಗಿದ್ದು, ಈ ಬಗ್ಗೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಬಾಲಕಿಯ ತಾಯಿ ನೀಡಿರು ದೂರಿನಂತೆ ಪ್ರಕರಣ ದಾಖಲಾಗಿದೆ.
”ಅಪ್ರಾಪ್ತ ವಯಸ್ಸಿನವಳಾಗಿರುವ ಮಗಳಿಗೆ ಆಲ್ಕೋಹಾಲ್ ಕುಡಿಸಿ ಮತ್ತು ಮಾದಕ ವಸ್ತು ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ” ಎಂದು ಸಂತ್ರಸ್ತೆ ಬಾಲಕಿಯ ತಾಯಿ ದೂರು ನೀಡಿದ್ದಾರೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಬಾಲಕಿಯನ್ನು ಆಪ್ತ ಸಮಾಲೋಚನೆಗಾಗಿ ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಿಸಲಾಗಿದೆ.