ಮಂಗಳೂರು: ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ತಲಾ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ವಿಧಾನ ಪರಿಷತ್‍ನ ಏಕೈಕ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರು 3,693 ಮತಗಳನ್ನು ಪಡೆದು ಜಯಗಳಿಸಿದ್ದಾರೆ.
ಪ್ರಥಮ ಪ್ರಾಶಸ್ತ್ಯದ ಮತಗಳಿಂದಲೇ ಅವರು ಆಯ್ಕೆಯಾಗಿದ್ದಾರೆ. ಇನ್ನು ಕಾಂಗ್ರೆಸ್‍ನ ಅಭ್ಯರ್ಥಿ ಮಂಜುನಾಥ ಭಂಡಾರಿ 2,077 ಮತಗಳನ್ನು ಪಡೆದಿದ್ದಾರೆ.
ಎಸ್‍ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ 203 ಮತಗಳನ್ನಷ್ಟೇ ಪಡೆದಿದ್ದಾರೆ. 39 ಮತಗಳು ತಿರಸ್ಕೃತಗೊಂಡಿವೆ