Ad Widget .

ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ವಿಧಿವಶ

Ad Widget . Ad Widget .

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಕನ್ನಡದ ಪ್ರಖ್ಯಾತ ಬರಹಗಾರ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಪತ್ನಿ ರಾಜೇಶ್ವರಿ ತೇಜಸ್ವಿಯವರು (84) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

Ad Widget . Ad Widget .

ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಜಲಕ್ಷ್ಮಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ತೇಜಸ್ವಿಯವರ ನಿಧನದ ಬಳಿಕ ರಾಜೇಶ್ವರಿಯವರು ಮೂಡಿಗೆರೆಯಲ್ಲೇ ನೆಲೆಸಿದ್ದರು. ಕೆಲವು ದಿನಗಳ ಹಿಂದೆ ಬೆಂಗಳೂರಿಗೆ ಮಗಳ ಮನೆಗೆ ಬಂದಿದ್ದರು.

ರಾಜೇಶ್ವರಿ ತೇಜಸ್ವಿ- 1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯಂ ಹೊಸ ಬಡಾವಣೆಯಲ್ಲಿ ತೀರಾ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದವರು. ಹೆಣ್ಣುಮಕ್ಕಳಿಗೂ ತಮ್ಮ ಕಾಲ ಮೇಲೆ ನಿಂತುಕೊಳ್ಳುವ ವಿದ್ಯಾಭ್ಯಾಸ ಕೊಡಬೇಕೆನ್ನುವ ತಮ್ಮ ತಂದೆಯ ಉದಾತ್ತ ಧ್ಯೇಯದಿಂದಾಗಿ ತತ್ವಶಾಸ್ತ್ರದಲ್ಲಿ ಆನರ್ಸ್ ಮತ್ತು ಎಂ.ಎ. ಮಾಡಲು ಮೈಸೂರಿನ ಮಾನಸ ಗಂಗೋತ್ರಿಗೆ ಪ್ರವೇಶ ಪಡೆದರು.

ಮೈಸೂರಿನಲ್ಲಿ ಪೂರ್ಣಚಂದ್ರ ತೇಜಸ್ವಿಯವರ ಪರಿಚಯವಾಗಿ ಪ್ರೀತಿಸಿದರು. ಕುವೆಂಪು ಅವರ ಆಶಯದಂತೆ ತೇಜಸ್ವಿ ಹಾಗೂ ರಾಜೇಶ್ವರಿ ಅವರ ವಿವಾಹ ಮಂತ್ರಮಾಂಗಲ್ಯ ಪ್ರಕಾರ 1966ರಲ್ಲಿ ಆಯಿತು. ‘ನನ್ನ ತೇಜಸ್ವಿ’ ರಾಜೇಶ್ವರಿ ಅವರ ಮೊಟ್ಟ ಮೊದಲ ಪುಸ್ತಕ. ಈಗ ಅದು ಐದನೇ ಮುದ್ರಣ ಕಂಡಿದೆ.

ಕ್ರೋಶ-ಟೈಲರಿಂಗ್, ಮೊಮ್ಮಕ್ಕಳು ಮತ್ತು ನೆರೆಹೊರೆಯ ಮಕ್ಕಳಿಗೆ Stamp collection ರಾಜೇಶ್ವರಿ ತೇಜಸ್ವಿಯವರ ಹವ್ಯಾಸವಾಗಿತ್ತು. ಇವತ್ತಿಗೆ E-mail ಇದ್ದರೂ ಅಪರೂಪದ Stamp collection ಮಾಡಿದವರು ಇವರು. ‘ನಮ್ಮ ಮನೆಗೂ ಬಂದರು ಗಾಂಧೀಜಿ’ ಇವರ ಎರಡನೆಯ ಪುಸ್ತಕ. ರಾಜೇಶ್ವರಿ ಅವರಿಗೆ ಇಬ್ಬರು ಹೆಣ್ಣುಮಕ್ಕಳಿದ್ದು ಇಬ್ಬರೂ ಸಾಫ್ಟ್ ವೇರ್ ಇಂಜಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Leave a Comment

Your email address will not be published. Required fields are marked *