Ad Widget .

ಚೆನ್ನೈ: ಹೆಲಿಕಾಪ್ಟರ್ ದುರಂತದ ಗಾಯಾಳು ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ

​ಬೆಂಗಳೂರು: ತಮಿಳುನಾಡಿನ ಕುನೂರು ಬಳಿ ನಡೆದ ವಿಮಾನ ಅಪಘಾತದಲ್ಲಿ ಬದುಕಿ ಉಳಿದಿದ್ದ ಏಕೈಕ ಯೋಧ ಐಎಎಫ್​ ಗ್ರೂಪ್​​ ಕ್ಯಾಪ್ಟನ್​ ವರುಣ್​ ಸಿಂಗ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದ್ದಾರೆ.

Ad Widget . Ad Widget .

ಕಳೆದ ಗುರುವಾರ ತಮಿಳುನಾಡಿನ ವೆಲ್ಲಿಂಗ್ಟನ್‌ ಮಿಲಿಟರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ವರುಣ್‌ ಅವರನ್ನು ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ಕರೆತರಲಾಗಿತ್ತು.

Ad Widget . Ad Widget .

‘ವರುಣ್‌ ಸಿಂಗ್‌ ಅವರ ದೇಹದಲ್ಲಿ ಅಪಾರ ಪ್ರಮಾಣದ ಸುಟ್ಟ ಗಾಯಗಳಾಗಿವೆ. ಅವರಿಗೆ ಸಾಕಷ್ಟು ಚರ್ಮದ ಅಗತ್ಯವಿದೆ. ಕಮಾಂಡೊ ಆಸ್ಪತ್ರೆಯವರ ಮನವಿ ಮೇರೆಗೆ 1 ಸಾವಿರ ಚದರ ಸೆಂ.ಮೀ. ಚರ್ಮವನ್ನು ನೀಡಲಾಗಿದೆ. ಇನ್ನಷ್ಟು ಚರ್ಮ ಬೇಕಾದರೆ ಮುಂಬೈ ಮತ್ತು ಚೆನ್ನೈನಲ್ಲಿರುವ ಚರ್ಮ ಬ್ಯಾಂಕ್‌ಗಳಿಂದ ತರಿಸಿ ಕೊಡಲಾಗುತ್ತದೆ’ ಎಂದು ವಿಕ್ಟೋರಿಯಾ ಆಸ್ಪತ್ರೆಯ ಮೂಲಗಳು ತಿಳಿಸಿದ್ದವು.

ಹೆಲಿಕಾಪ್ಟರ್‌ ಅವಘಡದಲ್ಲಿ ಸಿಡಿಎಸ್‌ ಮುಖ್ಯಸ್ಥ ಬಿಪಿನ್‌ ರಾವತ್‌ ಮತ್ತು ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದರು.

ಕಳೆದ ವರ್ಷ ತೇಜಸ್ ಯುದ್ಧ ವಿಮಾನವನ್ನು ಅಪಘಾತದಿಂದ ತಪ್ಪಿಸಿದ್ದಕ್ಕಾಗಿ ಆಗಸ್ಟ್‌ನಲ್ಲಿ ವರುಣ್‌ ಅವರಿಗೆ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

Leave a Comment

Your email address will not be published. Required fields are marked *