ದಾವಣಗೆರೆ: ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಚಲಾಯಿಸುತ್ತಿದ್ದ ಮೆಡಿಕಲ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ದಾವಣಗೆರೆಯಲ್ಲಿ ಸಂಭವಿಸಿದೆ. ದಾವಣಗೆರೆ ನಗರದ ಜೆಜೆಎಂ ಮೆಡಿಕಲ್ ಕಾಲೇಜ್ನಲ್ಲಿ ವಿದ್ಯಾರ್ಥಿನಿ ಗುಜರಾತ್ ಮೂಲದ ಪ್ರಿಯಾಂಕಾ (26) ಮೃತ ವಿದ್ಯಾರ್ಥಿನಿ.
ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುವಾಗ ಅನಿರೀಕ್ಷಿತವಾಗಿ ಕಾರು ಡಿಕ್ಕಿ ಹೊಡೆದಿದ್ದರಿಂದ ಸ್ಕೂಟಿಯಿಂದ ಕೆಳಗೆ ಬಿದ್ದ ಪ್ರಿಯಾಂಕಾ ತಲೆಗೆ ಪೆಟ್ಟು ಬಿದ್ದಿದೆ. ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ದಾರಿಯಲ್ಲೆ ಸಾವನ್ನಪ್ಪಿದ್ದಾರೆ.
ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.