ಉಪ್ಪಿನಂಗಡಿ : ಡಿಸೆಂಬರ್ 14ರ ರಾತ್ರಿ ಉಪ್ಪಿನಂಗಡಿಯಲ್ಲಿ ಠಾಣೆ ಮುಂಭಾಗ ನಡೆದ ಪ್ರತಿಭಟನೆಯ ವೇಳೆ 10 ಮಂದಿ ಪಿಎಫೈ ಕಾರ್ಯಕರ್ತರು ಪೊಲೀಸರ ಮೇಲೆ ನಡೆಸಿದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ಮೊಹಮ್ಮದ್ ತಾಹೀರ್, ಸ್ನಾಧಿಕ್, ಅಬ್ದುಲ್ ಮುಬಾರಕ್, ಅಬ್ದುಲ್ ಶರೀನ್, ಮೊಹಮ್ಮದ್ ಜಾಹಿರ್, ಸುಜೀರ್ ಮಹಮ್ಮದ್ ಪೈಜಲ್, ಮೊಹಮ್ಮದ್ ಹನೀಫ್, ಎನ್ ಕಾಸಿಂ .ಮೊಹಮ್ಮದ್ ಆಸಿಫ್ ಹಾಗೂ ತುಪೈಲ್ ಮಹಮ್ಮದ್ ಕೆ ಎಂದು ಗುರುತಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಸದ್ಯದಲ್ಲೇ ಇನ್ನೂ ಹಲವರ ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕಳೆದ 14 ರಂದು ಬಂಧಿತ ಆರೋಪಿಗಳು ಹಾಗೂ ಇತರರು ಸೇರಿಕೊಂಡು ಉಪ್ಪಿನಂಗಡಿಯ ಠಾಣೆಯ ಮುಂಭಾಗ ಅಕ್ರಮ ಕೂಟ ರಚಿಸಿ ಇಬ್ಬರು ಮಹಿಳಾ ಪೊಲೀಸರ ಮೇಲೆ ಖಾಸಗಿ ಭಾಗಕ್ಕೆ ಹಲ್ಲೆ ನಡೆಸಿ ಸಮವಸ್ತ್ರ ಹರಿದು ಮಾನಭಂಗಕ್ಕೆ ಯತ್ನಿಸಿ ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿತ್ತು. ಅಲ್ಲದೇ ಸಾರ್ವಜನಿಕ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿ, ಕೋವಿಡ್ ನಿಯಮ ಉಲ್ಲಂಘನೆ, 144 ಸೆಕ್ಷನ್ ನಿಷೇದಾಜ್ಞೆ ನಿಯಮ ಉಲ್ಲಂಘನೆ, ಪೋಲಿಸ್ ಠಾಣೆ ಹಾಗೂ ಪೋಲಿಸ್ ವಾಹನ ಜಖಂ ಗೊಳಿಸಿದ್ದಾರೆ ಎಂಬ ಆರೋಪದ ಮೇರೆಗೆ ಒಟ್ಟು ಹತ್ತು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು.