ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪ ವಿಧಿವಶ

ಕೋಲಾರ: ಅನಾರೋಗ್ಯದ ಕಾರಣ ಇಲ್ಲಿನ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪ ಅವರು ಇಂದು ಅಸುನೀಗಿದ್ದಾರೆ.

Ad Widget ... ..

97 ವರ್ಷ ವಯಸ್ಸಿನ ಜಾಲಪ್ಪ ಅವರು ಶ್ವಾಸಕೋಶ ಸಮಸ್ಯೆ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದು, ಅವರಿಗೆ ಡಯಾಲಿಸಿಸ್‌ ಮಾಡಲಾಗಿತ್ತು.

Ad Widget

ಫೆಬ್ರವರಿ ತಿಂಗಳಲ್ಲಿ ಪಾರ್ಶ್ವವಾಯುಗೆ ತುತ್ತಾಗಿದ್ದ ಜಾಲಪ್ಪ ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಹೀಗಾಗಿ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ನಂತರ ಅವರು ಚೇತರಿಸಿಕೊಂಡಿದ್ದರು.

ಕರ್ನಾಟಕದ ಪ್ರಮುಖ ರಾಜಕಾರಿಯಾಗಿದ್ದ ಜಾಲಪ್ಪ ಅವರು 4 ಬಾರಿ ಲೋಕಸಭಾ ಸದಸ್ಯರಾಗಿದ್ದರು. ಕೇಂದ್ರ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದ ಅವರು ಚಿಕ್ಕಬಳ್ಳಾಪುರ ಲೋಕಸಬಾ ಕ್ಷೇತ್ರದಿಂದ ಪ್ರತಿನಿಧಿಸುತ್ತಿದ್ದರು.

Leave a Comment

Your email address will not be published. Required fields are marked *