Ad Widget .

ಕೇರಳದಲ್ಲಿ ದಿನ ಬೆಳಗಾಗುವುದರೊಳಗೆ ಇಬ್ಬರು ರಾಜಕೀಯ ನಾಯಕರ ಹತ್ಯೆ| ಎಸ್.ಡಿ.ಪಿ.ಐ ಹಾಗೂ ಬಿಜೆಪಿ ನಾಯಕರು ಬಲಿ

Ad Widget . Ad Widget .

ಆಲಪ್ಪುಝ: ಬಿಜೆಪಿ ಕೇರಳ ರಾಜ್ಯ ಸಮಿತಿ ಸದಸ್ಯನನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

Ad Widget . Ad Widget .

ರಂಜಿತ್ ಶ್ರೀನಿವಾಸನ್ ಹತ್ಯೆ ಗೊಳಗಾದವರು. ಇವರು ಬಿಜೆಪಿಯ ರಾಜ್ಯ ಒಬಿಸಿ ಮೋರ್ಚಾದ ನಾಯಕ ಮತ್ತು ಆರೆಸ್ಸೆಸ್ ನಾಯಕನಾಗಿದ್ದರು. ಇವರ ವಾಸದ ಮನೆಗೆ ನುಗ್ಗಿದ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ರಾತ್ರಿ ಎಸ್ ಡಿಪಿಐ ಕೇರಳ ರಾಜ್ಯ ಸಮಿತಿ ಸದಸ್ಯನನ್ನು ಸಂಘ ಪರಿವಾರದ ಕಾರ್ಯಕರ್ತರು ಎನ್ನಲಾದ ವ್ಯಕ್ತಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಕೆ.ಎಸ್ ಶಾನ್ ನಿನ್ನೆ ರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳ ಕಾರು ಅವರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬಳಿಕ ದುಷ್ಕರ್ಮಿಗಳು ಅವರ ಮೇಲೆ ಮಾರಕಾಸ್ತ್ರದಿಂದ ಬರ್ಬರವಾಗಿ ಹಲ್ಲೆ ನಡೆಸಿದ್ದಾರೆ. ಎಸ್ ಡಿಪಿಐ ರಾಜ್ಯ ಸಮಿತಿ ಸದಸ್ಯ ಶಾನ್ ಅವರ ಹತ್ಯೆ ನಡೆದ ಬೆನ್ನಲ್ಲೇ ಘಟನೆ ನಡೆದಿದೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ತನಿಖೆ ನಡೆಯುತ್ತಿದೆ.

Leave a Comment

Your email address will not be published. Required fields are marked *