Ad Widget .

ಶೋಭಾ ಕರಂದ್ಲಾಜೆಗೆ ಕರ್ನಾಟಕದಲ್ಲಿ ಒಲಿಯಲಿದೆಯಾ “ದೊಡ್ಡ ಹುದ್ದೆ” | ಸೈಲೆಂಟಾಗಿ ಕೆಲ್ಸ ಮಾಡ್ತಿರುವ ಕೇಂದ್ರ ಸಚಿವೆಯ ಮುಂದಿನ ನಡೆ ಏನು?

Ad Widget . Ad Widget .

ಬೆಂಗಳೂರು: ಕರ್ನಾಟಕ ಬಜೆಪಿಯ ಪ್ರಮುಖ ಮಹಿಳಾ ನಾಯಕಿ, ಪ್ರಸ್ತುತ ಕೇಂದ್ರದಲ್ಲಿ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರು ಇತ್ತೀಚೆಗೆ ವಿವಾದಗಳಿಂದ ದೂರ ಉಳಿಯುತ್ತಿರುವುದು ಹಾಗೂ ಎಲ್ಲದ್ದಕ್ಕೂ ಪ್ರತಿಕ್ರಿಯಿಸದಿರುವುದರ ಹಿಂದೆ ಬಿಜೆಪಿ ಹೈಕಮಾಂಡ್‌ನ ವಿಶೇಷ ಸೂಚನೆಯಿಂದ ಎಂಬ ಮಾತುಗಳು ಕೇಳಿಬರುತ್ತಿವೆ.

Ad Widget . Ad Widget .

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾಗಿರುವ ಶೋಭಾ ಕರಂದ್ಲಾಜೆ ಅವರು ಕೆಲವು ತಿಂಗಳಿಂದ ತಾವಾಯಿತು, ತಮ್ಮ ಕೆಲಸವಾಯಿತು ಎಂಬಂತಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಚಟುವಟಿಕೆಗಳು, ಕೋಮು ಪ್ರಚೋದನೆಯ ಕೆಲಸಗಳು ನಡೆಯುತ್ತಿದ್ದರೂ ಸಹ ಅವರು ತುಟಿ ಬಿಚ್ಚುತ್ತಿಲ್ಲ. ಶೋಭಾ ಕರಂದ್ಲಾಜೆ ಅವರ ಹಿಂದಿನ ರಾಜಕಾರಣ ಮತ್ತು ಅವರು ಬೆಳೆದು ಬಂದ ದಾರಿಯನ್ನು ನೋಡಿದವರಿಗೆ ಈಗಿರುವ ಶೋಭಾ ಕರಂದ್ಲಾಜೆಯನ್ನು ಅರಗಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ.

ಶೋಭಾ ಕರಂದ್ಲಾಜೆ ಅವರು ಇತ್ತೀಚೆಗೆ ಮೌನವಾಗಿ ರಾಜಕಾರಣ ಮಾಡುತ್ತಿರುವುದರ ಹಿಂದೆ ಹೈಕಮಾಂಡ್ ಸ್ಪಷ್ಟ ನಿರ್ದೇಶನ ಇದೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ನಿಮಗೆ ‘ದೊಡ್ಡ ಹುದ್ದೆ’ ಒಲಿಯಬಹುದು. ಆದ್ದರಿಂದ ಯಾವುದೇ ವಿವಾದವನ್ನು ಎಳೆದುಕೊಳ್ಳದೆ ನೀವಾಯಿತು, ನಿಮ್ಮ ಕೆಲಸವಾಯಿತು ಎಂಬಂತೆ ಇರಿ ಎಂದು ಒಂದಲ್ಲಾ ಎರಡು ಬಾರಿ ಹಿರಿಯ ನಾಯಕರು ಶೋಭಾ ಕರಂದ್ಲಜೆ ಅವರಿಗೆ ಹೇಳಿದ್ದಾರೆ ಎಂದು ಅವರ ಆಪ್ತಮೂಲಗಳು ತಿಳಿಸಿವೆ.

ಆದರೆ, ‘ದೊಡ್ಡ ಹುದ್ದೆ’ ಎಂದರೆ ಯಾವುದು? ಅದು ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯೇ? ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವೇ? ಕೊಟ್ಟರೆ ಹೊಸ ಜವಾಬ್ದಾರಿ ಯಾವಾಗ ಕೊಡಬಹುದು? ಎಂಬುದರ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಹೀಗಾಗಿ ಶೋಭಾ ಕರಂದ್ಲಾಜೆ ಅವರು ಎಲ್ಲೂ ವಿವಾದ ಮಾಡಿಕೊಳ್ಳುತ್ತಿಲ್ಲ

ಮೂಲಗಳ ಪ್ರಕಾರ 2022ರ ಜನವರಿ ಅಥವಾ ಫೆಬ್ರವರಿಯಲ್ಲಿ ಮಂಡಿನೋವಿನ ಚಿಕಿತ್ಸೆಗಾಗಿ ಬಸವರಾಜ ಬೊಮ್ಮಾಯಿ ಅವರು ಅಮೆರಿಕಾಗೆ ತೆರಳಬಹುದು. ಆ ವೇಳೆಗೆ ಅವರೇ ಖುದ್ದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬಹುದು ಎಂದೂ ಸಹ ಹೇಳಲಾಗುತ್ತದೆ.

ಒಂದು ವೇಳೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಹುದ್ದೆ ತೊರೆದರೆ ಅದಕ್ಕೆ ಪರಿಗಣಿಸುವ ಹೆಸರುಗಳಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಸಚಿವ ಮುರುಗೇಶ್ ನಿರಾಣಿ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ಶೆಟ್ಟರ್ ಈಗಾಗಲೇ ಒಂದು ಬಾರಿ ಮುಖ್ಯಮಂತ್ರಿ ಆಗಿದ್ದಾರೆ. ನಿರಾಣಿ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಎಂದು ಈಗಾಗಲೇ ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಆದರೆ, ಶೋಭಾ ಕರಂದ್ಲಾಜೆ ಅವರನ್ನು ಮುಖ್ಯಮಂತ್ರಿ ಮಾಡಿದರೆ ರಾಜ್ಯದಲ್ಲಿ ಮೊದಲ ಬಾರಿಗೆ ಮಹಿಳೆಯೊಬ್ಬರನ್ನು ಮುಖ್ಯಮಂತ್ರಿ ಮಾಡಿದ ಸಂದೇಶ ನೀಡಿದಂತಾಗುತ್ತದೆ. ಅದಲ್ಲದೆ, ಮುಂದಿನ ಚುನಾವಣೆಗೆ ಪಕ್ಷ ಮತ್ತು ಆರ್‌ಎಸ್‌ಎಸ್‌ ಎರಡನ್ನೂ ಸರಿದೂಗಿಸಿಕೊಂಡು ಹೋಗುವ ವಿಶ್ವಾಸ ಬಿಜೆಪಿ ಹೈಕಮಾಂಡ್‌ಗೆ ಇದೆ ಎನ್ನಲಾಗಿದೆ.

ಇದನ್ನೂ ಓದಿ…

Leave a Comment

Your email address will not be published. Required fields are marked *