ಸುಳ್ಯ: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಓಡಿಸಲು ಕೀ ಕೊಟ್ಟು ಪೋಷಕರು ದಂಡ ಕಟ್ಟಿದ ಘಟನೆ ಸುಳ್ಯದಲ್ಲಿ ನಡೆದಿದೆ.
ತಾಲೂಕಿನ ದೇವಚಳ್ಳದ ಅಪ್ರಾಪ್ತ ಬಾಲಕನೋರ್ವ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಪ್ರಕರಣದ ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯ ಪೋಷಕರಿಗೆ 10,000 ರೂ. ದಂಡ ವಿಧಿಸಿದೆ.
ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಸುರೇಶ ಎನ್ನುವವರು ತನ್ನ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅನುಮತಿ ನೀಡಿದ್ದರು. ಈ ಕುರಿತು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಸುಳ್ಯ ಸಿಜೆ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಬಾಲಕನ ಪೋಷಕರಿಗೆ 10,000 ರೂ. ದಂಡ ವಿಧಿಸಿದೆ.