Ad Widget .

ಯುವತಿಯರನ್ನು ಬಳಸಿ ಹನಿಟ್ರ್ಯಾಪ್| ಆರೋಪಿ ಕೈಗೆ ಕೋಳ ಬಿಗಿದ ಪೊಲೀಸರು|

Ad Widget . Ad Widget .

ಉಡುಪಿ : ಹಣಕ್ಕಾಗಿ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಶಂಕರ ನಾರಾಯಣ ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ರಂಜಿತ್ ಎಸ್. ಹೆಂಗವಳ್ಳಿ (26) ಬಂಧಿತ ಆರೋಪಿ. ರಂಜಿತ್ ಹಣಕ್ಕಾಗಿ ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದನು ಎಂದು ವ್ಯಕ್ತಿಯೊಬ್ಬರು ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಡಿ.17ರಂದು ಸಂಜೆ ವೇಳೆ ಬಂಧಿಸಿದ್ದಾರೆ.

ಆರೋಪಿಯನ್ನು ಡಿ.18ರಂದು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *