Ad Widget .

ಸಿಎಂ ಬೊಮ್ಮಾಯಿ ಭಾವನಾತ್ಮಕ ಮಾತು| ಹೊಸ ಅರ್ಥ ಪಡೆದುಕೊಂಡ ಬಿ.ಎಲ್ ಸಂತೋಷ್ ಹೇಳಿಕೆ| ಸಂಕ್ರಾಂತಿ ಬಳಿಕ ಕರ್ನಾಟಕದಲ್ಲಿ ರಾಜಕೀಯ ಕ್ರಾಂತಿ!? ಕರ್ನಾಟಕಕ್ಕೆ ಮತ್ತೆ ಹೊಸ ಮುಖ್ಯಮಂತ್ರಿ?

Ad Widget . Ad Widget .

ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ವಿಚಾರದ ಚರ್ಚೆ ಮತ್ತೆ ಗರಿಗೆದರಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ (ಡಿ 19) ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ಆಡಿರುವ ಭಾವುಕ ಮಾತುಗಳಿಂದಾಗಿ ಸಾವರ್ಕರ್ ಪುಸ್ತಕ ಬಿಡುಗಡೆಯ ವೇಳೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರ ಮಾತುಗಳಿಗೆ ಹೊಸ ಅರ್ಥ ಬಂದಿದೆ.

Ad Widget . Ad Widget .

ನಗರದ ಪುರಭವನದಲ್ಲಿ ಶನಿವಾರ ನಡೆದ ವೀರ್ ಸಾವರ್ಕರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ್ದ ಬಿ.ಎಲ್.ಸಂತೋಷ್, ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಸಿಎಂ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದಾರೆ ಎಂದು ಚರ್ಚೆಯಾಗುತ್ತಿದೆ. ಆದರೆ ವೀರ ಸಾವರ್ಕರ್ ಬಗ್ಗೆ ಸಿಎಂ ಮಾತುಗಳನ್ನು ಕೇಳಿದರೆ ಅದ್ಯಾವುದು ಇಲ್ಲ ಎಂಬುದು ಎಲ್ಲರಿಗೂ ಸ್ಪಷ್ಟವಾಗುತ್ತದೆ ಎಂದಿದ್ದರು.

ಏಕಾಏಕಿ ಈ ವಿಚಾರ ಚರ್ಚೆಗೆ ಬಂದಿದ್ದು ಎಲ್ಲರಿಗೂ ಅಚ್ಚರಿಯುಂಟು ಮಾಡಿತ್ತು. ಈ ವಿಚಾರ ಪ್ರಸ್ತಾಪ ಮಾಡುವ ಯಾವುದೇ ಹಿನ್ನೆಲೆಯಲ್ಲಿ ಸಭೆಯಲ್ಲಿ ಇರಲಿಲ್ಲ. ಆದರೂ ಸಂತೋಷ್ ಅವರೇಕೆ ಈ ವಿಷಯ ಪ್ರಸ್ತಾಪಿಸಿದರು ಎಂಬ ಚರ್ಚೆಗಳು ಗರಿಗೆದರಿದ್ದವು. ಮುಖ್ಯಮಂತ್ರಿ ವಿಚಾರವನ್ನು ಅಷ್ಟಕ್ಕೇ ಬಿಟ್ಟ ಸಂತೋಷ್ ಬಳಿಕ ವೀರ ಸಾವರ್ಕರ್ ಬಗ್ಗೆ ಮಾತು ಮುಂದುವರಿಸಿದರು. ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗೆ ಬಂದಿರಬಹುದು ಎಂಬ ಅನುಮಾನವನ್ನೂ ಹಲವರು ವ್ಯಕ್ತಪಡಿಸಿದ್ದರು.

ಈ ಬೆಳವಣಿಗೆಯ ಮುಂದುವರಿದ ಅಧ್ಯಾಯ ಎಂಬಂತೆ ಇದೀಗ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಅಧಿಕಾರದ ಕುರಿತು ಭಾವುಕ ಮಾತುಗಳನ್ನು ಆಡಿದ್ದಾರೆ. ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಭಾವೋದ್ವೇಗಕ್ಕೆ ಒಳಗಾದ ಬೊಮ್ಮಾಯಿ, ಸಿಎಂ ಆದ ನಂತರ ಕ್ಷೇತ್ರದ ಕಡೆ ಹೆಚ್ಚು ಗಮನ ಕೊಡಲಾಗುತ್ತಿಲ್ಲ. ಸಿಎಂ ಸ್ಥಾನದ ಜೊತೆ ಕ್ಷೇತ್ರದ ಜನರ ಒಲವು ಉಳಿಸಿಕೊಳ್ಳಬೇಕು. ಕ್ಷೇತ್ರದ ಜನರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕಿರುತ್ತದೆ ಎಂದು ಹೇಳಿದರು. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆಯುತ್ತಿರುವುದು ತನಗೂ ಗೊತ್ತಿದೆ ಎಂಬುದನ್ನು ಸಾರಿಹೇಳಲೆಂದೇ ಬೊಮ್ಮಾಯಿ ಹೀಗೆ ಹೇಳಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಕ್ಷೇತ್ರದ ಜನತೆಯ ಎದುರು ಭಾವುಕರಾಗಿ ಮಾತನಾಡುವ ಮೂಲಕ ಅವರ ಮನ ಗೆಲ್ಲಲು, ತಾನು ಮುಖ್ಯಮಂತ್ರಿಯಾದ ನಂತರ ಬದಲಾಗಿಲ್ಲ ಎಂದು ಮನಗಾಣಿಸಲು ಬೊಮ್ಮಾಯಿ ಪ್ರಯತ್ನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ನಡುವೆ ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ಕ್ರಾಂತಿಯಾಗಲಿದೆ ಎಂದು ಹೇಳಲಾಗುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಮಂಡಿನೋವು ಮತ್ತು ಆರೋಗ್ಯದ ಸಮಸ್ಯೆಯೂ ಇರುವುದರಿಂದ ನಾಯಕತ್ವ ಬದಲಾವಣೆ ಮಾಡಬೇಕಾಗಬಹುದು. ಅಲ್ಲದೇ ಯಡಿಯೂರಪ್ಪರವರಿಗೂ ರಾಜ್ಯದಲ್ಲಿ ಉನ್ನತ ಹುದ್ದೆ ನೀಡಿ ಮುಂಬರುವ ಚುನಾವಣೆಗೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಹೈ ಕಮಾಂಡ್ ಪ್ಲ್ಯಾನ್ ಮಾಡುತ್ತಿದೆ.

ಈ ನಡುವೆ ರಾಜ್ಯಕ್ಕೆ ಮಹಿಳಾ ಸಿಎಂ ನೀಡುವ ಬಗ್ಗೆಯೂ ಚರ್ಚೆಯಾಗ್ತಿದೆ ಎನ್ನಲಾಗುತ್ತಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಈ ಪಟ್ಟ ಒಲಿಯುತ್ತದೆ ಎಂದು ಹೇಳಲಾಗುತ್ತಿದೆ.

ನಾವು ಎಷ್ಟು ದಿನ ಇರುತ್ತೇವೆ ಎನ್ನುವುದು ಗೊತ್ತಿಲ್ಲ. ಸ್ಥಾನಮಾನಗಳು ಶಾಶ್ವತವಲ್ಲ. ನಿಮ್ಮೆಲ್ಲರ ಆಶೀರ್ವಾದದಿಂದ ಈ ರಾಜ್ಯದ ಮುಖ್ಯಮಂತ್ರಿಯಾಗಿ‌ ನಿಂತಿದ್ದೇನೆ. ಕ್ಷೇತ್ರದ ಹೊರಗಡೆ ಇದ್ದಾಗ ನಾನು ಸಿಎಂ, ಗೃಹ ಸಚಿವ. ಆದರೆ ಕ್ಷೇತ್ರದ ಒಳಗಡೆ ಬಂದಾಗ ನಾನು ಬಸವರಾಜ ಬೊಮ್ಮಾಯಿ ಆಗಿ ಉಳಿಯುತ್ತೇನೆ. ಬಸವರಾಜ ಬೊಮ್ಮಾಯಿ ಅನ್ನೋದು ಶಾಶ್ವತ, ಅದರ ಹಿಂದಿರುವ ಪದನಾಮಗಳು ಶಾಶ್ವತವಲ್ಲ ಎಂಬ ಸಿಎಂ ರ ಮಾತುಗಳು ಈ ಎಲ್ಲಾ ಚರ್ಚೆಗೆ ಸಾಕ್ಷಿಯಾಗುತ್ತಿದೆ.

ಇದನ್ನೂ ಓದಿ…

Leave a Comment

Your email address will not be published. Required fields are marked *