Ad Widget .

ಮತ್ತೆ ಉಲ್ಬಣಿಸುತ್ತಿರುವ ಕೊರೊನಾ| ಸಿಎಂ ನೇತ್ರತ್ವದಲ್ಲಿ ತುರ್ತು ಸಭೆ| ಕರ್ನಾಟಕದಲ್ಲಿ ಮುಂದಿನ ವಾರದಿಂದ ನೈಟ್ ಕರ್ಪ್ಯೂ?

Ad Widget . Ad Widget .

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತುರ್ತು ಸಭೆ ಕರೆದಿದ್ದಾರೆ.

Ad Widget . Ad Widget .

ಇಂದು ಮಧ್ಯಾಹ್ನ 2.45ಕ್ಕೆ ಸುವರ್ಣಸೌಧದಲ್ಲಿ ಸಭೆ ನಡೆಸಲಿರುವ ಸಿಎಂ, ಒಮಿಕ್ರಾನ್​ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಕೋವಿಡ್ ವ್ಯಾಕ್ಸಿನೇಷನ್‌ ಡ್ರೈವ್ ಮತ್ತಷ್ಟು ವೇಗ ಹೆಚ್ಚಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಈಗಾಗಲೇ ರಾಜ್ಯದಲ್ಲಿ 90.06% ಜನರು ಮೊದಲ ಡೋಸ್​ ಲಸಿಕೆ ಪಡೆದಿದ್ದಾರೆ. ಎರಡನೇ ಡೋಸ್ ಹಾಕಿಸದವರಿಗೆ ಕಡ್ಡಾಯವಾಗಿ ಲಸಿಕೆ ಪಡೆಯುವಂತೆ ಸೂಚನೆ ನೀಡಲಿರುವ ರಾಜ್ಯ ಸರ್ಕಾರ, ಕ್ರಿಸ್‌ಮಸ್ ಹಾಗೂ ಹೊಸವರ್ಷ ಆಚರಣೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಿದೆ.

ಅಲ್ಲದೇ ಮುಂದಿನ ವಾರದಿಂದ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ‌ ನೈಟ್‌ಕರ್ಫ್ಯೂ ಜಾರಿ‌ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Leave a Comment

Your email address will not be published. Required fields are marked *