Ad Widget .

ಹೊಸ ವರ್ಷಾಚರಣೆ, ಕ್ರಿಸ್ಮಸ್ ಹಬ್ಬ ಆಚರಣೆಗೆ ಹೊಸ ಮಾರ್ಗಸೂಚಿ| ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್ ನಲ್ಲಿ ಎನೇನಿದೆ ಗೊತ್ತಾ?

Ad Widget . Ad Widget .

ಬೆಂಗಳೂರು: ಕರೊನಾ, ಒಮಿಕ್ರಾನ್‌ ಭೀತಿಯ ನಡುವೆ ಮತ್ತೊಂದು ಹೊಸ ವರ್ಷ ಕಾಲಿಡುತ್ತಿದೆ. ಕಳೆದ ವರ್ಷದಂತೆಯೇ ನೂತನ ವರ್ಷದ ಆಚರಣೆಗೆ ಈ ಬಾರಿಯೂ ಬ್ರೇಕ್‌ ಹಾಕಲಾಗಿದೆ. ಕ್ಷಣಕ್ಷಣಕ್ಕೂ ಕರೊನಾ ಜತೆ ಒಮಿಕ್ರಾನ್‌ ಭೀತಿ ಕಾಡುತ್ತಿರುವ ಹಿನ್ನೆಲೆಯಲ್ಲಿ ಕ್ರಿಸ್‌ಮಸ್‌ ಮತ್ತು ಹೊಸ ವರ್ಷದ ಆಚರಣೆಗೆ ಕೆಲವೊಂದು ಕಟ್ಟುನಿಟ್ಟಿನ ನಿಯಮ ಮಾಡಲಾಗಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೆಲವೊಂದು ಮಾಹಿತಿ ನೀಡಿದ್ದಾರೆ.

Ad Widget . Ad Widget .

ತಜ್ಞರ ಜತೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ನಂತರ ಕ್ರಿಸ್‌ಮಸ್‌ ಮತ್ತು ಹೊಸ ವರ್ಷಾಚರಣೆಗೆ ಕೆಲವೊಂದು ಷರತ್ತುಗಳನ್ನು ವಿಧಿಸಿರುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಡಿಸೆಂಬರ್‌ 30ರಿಂದ ಜನವರಿ 2ನೇ ತಾರೀಖಿನವರೆಗೆ ಈ ನಿಷೇಧ ಚಾಲ್ತಿಯಲ್ಲಿ ಇರುತ್ತದೆ.

ಹಾಗಾದ್ರೆ ಹೊಸ ರೂಲ್ಸ್ ನಲ್ಲಿ ಏನೇನಿದೆ? ತಿಳಿದುಕೊಳ್ಳಿ.

  • ಬೆಂಗಳೂರಿನ ಎಂಜಿರಸ್ತೆ ಮತ್ತು ಬ್ರಿಗೆಡ್‌ ರಸ್ತೆಯಲ್ಲಿ ಈ ಬಾರಿಯೂ ಕಳೆದ ವರ್ಷದಂತೆ ಸಾಮೂಹಿಕವಾಗಿ ಜನರು ಸೇರುವುದನ್ನು ನಿಷೇಧಿಸಲಾಗಿದೆ. ಇವಿಷ್ಟೇ ಅಲ್ಲದೇ, ರಾಜ್ಯದ ಯಾವುದೇ ಭಾಗಗಳಲ್ಲಿ ಹೊಸ ವರ್ಷಕ್ಕೆಂದು ಜನರು ಗುಂಪುಗೂಡುವಂತಿಲ್ಲ.
  • ರೆಸ್ಟೋರೆಂಟ್‌, ಕ್ಲಬ್‌ಗಳಲ್ಲಿ ಪಾರ್ಟಿ ಮಾಡುವಂತಿಲ್ಲ. ಡಿಸ್ಕೋ ಜಾಕಿ (ಡಿಜೆ), ಇತ್ಯಾದಿ ಅಬ್ಬರದ ಸಂಗೀತಗಳಿಗೆ ನಿಷೇಧ ಹೇರಲಾಗಿದೆ.
  • ರೆಸ್ಟೋರೆಂಟ್‌, ಕ್ಲಬ್‌ಗಳಲ್ಲಿ ಇರುವ ಕೆಪ್ಯಾಸಿಟಿಗಿಂತ ಶೇ.50ರಷ್ಟು ಮಾತ್ರ ಜನರು ಇರಲು ಅವಕಾಶ ಕಲ್ಪಿಸಲಾಗಿದೆ. ಶೇ.50ಕ್ಕಿಂತ ಹೆಚ್ಚು ಜನರು ಇವುಗಳಲ್ಲಿ ಸೇರುವಂತಿಲ್ಲ.

*ಅ‍ಪಾರ್ಟ್‌ಮೆಂಟ್‌ಗಳಲ್ಲಿ ಕೂಡ ಸಾಮೂಹಿಕವಾಗಿ ಪಾರ್ಟಿ ಮಾಡುವಂತಿಲ್ಲ, ಡಿಸ್ಕೋ ಜಾಕಿ ಇತ್ಯಾದಿ ಸಂಗೀತ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ. ಇವುಗಳ ಜವಾಬ್ದಾರಿಯನ್ನು ಆಯಾ ಅಪಾರ್ಟ್‌ಮೆಂಟ್‌ ಅಸೋಸಿಯೇಷನ್‌ ನೋಡಿಕೊಳ್ಳಬೇಕು.

*ಇವೆಲ್ಲವೂ ಡಿಸೆಂಬರ್‌ 30ರಿಂದ ಜನವರಿ 2ನೇ ತಾರೀಖಿನವರೆಗೆ ಈ ನಿಷೇಧ ಚಾಲ್ತಿಯಲ್ಲಿ ಇರುತ್ತದೆ. ಆದರೆ 25ರಂದು ಕ್ರಿಸ್‌ಮಸ್‌ ಇರುವ ಹಿನ್ನೆಲೆಯಲ್ಲಿ ಅವುಗಳಿಗೂ ಕೆಲವೊಂದು ನಿಯಮ ಮಾಡಲಾಗಿದೆ. ಕ್ರಿಸ್‌ಮಸ್‌ ಯಾವುದೇ ಬಹಿರಂಗ ಪಾರ್ಟಿ ಮಾಡುವಂತಿಲ್ಲ.

  • ಕ್ರಿಸ್‌ಮಸ್‌ ಸಂದರ್ಭದಲ್ಲಿ ಆಂತರಿಕವಾಗಿ ಪ್ರಾರ್ಥನೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೋವಿಡ್‌ನ ಎಲ್ಲಾ ನಿಯಮಗಳನ್ನು ಪಾಲನೆ ಮಾಡಬೇಕು. ಸಾಮಾಜಿಕ ಅಂತರ, ಸೆನಿಟೈಸರ್‌ ಎಲ್ಲವನ್ನೂ ಕಾಪಾಡಬೇಕು. ಕ್ಲಬ್‌ಗೆ ಬರುವವರಿಗೆ ಎರಡು ಡೋಸ್‌ ಲಸಿಕೆ ಕಡ್ಡಾಯ ಮಾಡಲಾಗಿದೆ. ಅಲ್ಲಿರುವ ಸಿಬ್ಬಂದಿಗೆ ಪರೀಕ್ಷೆ ಮಾಡಿಸಬೇಕು.

Leave a Comment

Your email address will not be published. Required fields are marked *