Ad Widget .

ಮಂಗಳೂರು: ಮೊಬೈಲ್ ಕದ್ದ ನೆಪದಲ್ಲಿ ಮೀನುಗಾರನಿಗೆ ಚಿತ್ರಹಿಂಸೆ| 6 ಮಂದಿಯನ್ನು ಬಂಧಿಸಿದ ‌ಪೊಲೀಸರು|

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಂಗಳೂರು: ನಗರದ ಬಂದರ್ ನಲ್ಲಿ ಮೀನುಗಾರನೊಬ್ಬನನ್ನು ಬೋಟ್ ನಲ್ಲಿ ತಲೆಕೆಳಗಾಗಿಸಿ ನೇತು ಹಾಕಿ ಹಲ್ಲೆ ಮಾಡಿರುವ ಘಟನೆಗೆ ಸಂಬಂಧಿಸಿ 6 ಮಂದಿ ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸ್ ಆಯುಕ್ತ ಶಶಿಕುಮಾರ್ ಗುರುವಾರ ತಿಳಿಸಿದ್ದಾರೆ.

Ad Widget . Ad Widget . Ad Widget .

ಬಂಧಿತ ಆರೋಪಿಗಳು, ಕೊಂಡೂರು ಪೋಲಯ್ಯ (23), ಅವುಲ ರಾಜ್ ಕುಮಾರ್ (26), ಕಾಟಂಗರಿ ಮನೋಹರ್ (21), ವುಟುಕೋರಿ ಜಾಲಯ್ಯ (30), ಕರ್ಪಿಂಗಾರಿ ರವಿ (27) ಮತ್ತು ಪ್ರಳಯ ಕಾವೇರಿ ಗೋವಿಂದಯ್ಯ (47) ಎನ್ನುವವರಾಗಿದ್ದು, ಎಲ್ಲರೂ ಆಂಧ್ರಪ್ರದೇಶ ಮೂಲದ ಮೀನುಗಾರರಾಗಿದ್ದಾರೆ.

ಆಂಧ್ರ ಪ್ರದೇಶ ಮೂಲದ ಮೀನುಗಾರ ವೈಲ ಸೀನು ಎಂಬ ವ್ಯಕ್ತಿಯನ್ನು, ಮೀನುಗಾರಿಕಾ ಬೋಟ್ ನಲ್ಲಿ ಮೊಬೈಲ್ ಕಳ್ಳತನ ಮಾಡಿದ ಆರೋಪದ ಮೇಲೆ, ಸತ್ಯವನ್ನು ಹೊರ ಹಾಕಿಸಲು, ಬೆದರಿಸಿ ಬೋಟ್ ನ ಹುಕ್ಸ್ ಗೆ ಕಾಲನ್ನು ಕಟ್ಟಿ ತಲೆ ಕೆಳಗಾಗಿ ತೂಗು ಹಾಕಿ ಹಲ್ಲೆ ಮಾಡಲಾಗಿತ್ತು, ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು ಮತ್ತು ವಿಡಿಯೋ ವೈರಲ್ ಆಗಿತ್ತು.

ಪಾಂಡೇಶ್ವರ ಪೊಲೀಸರು ಕೊಲೆಯತ್ನದ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

Leave a Comment

Your email address will not be published. Required fields are marked *