ಬೈಕ್ ಗಳ ಮುಖಾಮುಖಿ ಢಿಕ್ಕಿ| ಮೂವರು ಸ್ಪಾಟ್ ಔಟ್|

Ad Widget ... ..

ದಾವಣಗೆರೆ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತಕ್ಕನಹಳ್ಳಿಯಲ್ಲಿ ನಡೆದಿದೆ.

Ad Widget

ತಕ್ಕನಹಳ್ಳಿ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹೇಶಪ್ಪ, ಸಂಜು, ಪ್ರಶಾಂತ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಆನಂದ್ ಗೆ ಗಂಭೀರ ಗಾಯಗೊಂಡಿದ್ದು, ಶಿವಮೊಗ್ಗ ಅಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *