Ad Widget .

ಕಿರುತೆರೆ ಇತಿಹಾಸದಲ್ಲಿ ದಾಖಲೆ ಬರೆದ ‘ಪುಟ್ಟಕ್ಕನ ಮಕ್ಕಳು’| ವಾರದಲ್ಲೇ ಭರ್ಜರಿ ಟಿಆರ್ ಪಿ|

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆರಂಭಿಸಿರುವ ‘ಪುಟ್ಟಕ್ಕನ ಮಕ್ಕಳು’ ಸೀರಿಯಲ್ ಅಪಾರ​ ಜನಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈ ಧಾರಾವಾಹಿ​ ಗಿಟ್ಟಿಸಿಕೊಂಡಿರುವ ಟಿಆರ್​ಪಿ ಕಂಡು ಎಲ್ಲರೂ ಅಚ್ಚರಿ ಪಟ್ಟಿದ್ದಾರೆ.

Ad Widget . Ad Widget .

ಹಿರಿಯ ನಟಿ ಉಮಾಶ್ರಿ ನಟಿಸಿರುವ ಹೊಸ ಸೀರಿಯಲ್​ ‘ಪುಟ್ಟಕ್ಕನ ಮಕ್ಕಳು’ ಪ್ರಸಾರ ಆರಂಭಿಸಿರುವ ಈ ಧಾರಾವಾಹಿಗೆ ಭರ್ಜರಿ ಸ್ವಾಗತ ಸಿಕ್ಕಿದೆ. ಟಿಆರ್​ಪಿ ವಿಚಾರದಲ್ಲಿ ಈ ಸೀರಿಯಲ್​ ದಾಖಲೆ ಬರೆದಿದೆ. ಕನ್ನಡ ಕಿರುತೆರೆ ಇತಿಹಾಸದಲ್ಲಿ ಬೇರೆ ಯಾವುದೇ ಧಾರಾವಾಹಿ ಪಡೆದುಕೊಳ್ಳದಷ್ಟು ಗ್ರ್ಯಾಂಡ್​ ಓಪನಿಂಗ್​ ಅನ್ನು ‘ಪುಟ್ಟಕ್ಕನ ಮಕ್ಕಳು’ ಸೀರಿಯಲ್​ ಪಡೆದುಕೊಂಡಿದೆ.

Ad Widget . Ad Widget .

ಯಾವುದೇ ಹೊಸ ಧಾರಾವಾಹಿ ಆರಂಭ ಆದಾಗ ಅದರ ಬಗ್ಗೆ ವೀಕ್ಷಕರು ಆಸಕ್ತಿ ತೋರಿಸುವುದು ಸಹಜ. ಹಾಗೆಯೇ ‘ಪುಟ್ಟಕ್ಕನ ಮಕ್ಕಳು’ ಕೂಡ ಜನಮೆಚ್ಚುಗೆ ಪಡೆದುಕೊಂಡಿದೆ. ಈ ಸೀರಿಯಲ್​ ಗಿಟ್ಟಿಸಿಕೊಂಡಿರುವ ಟಿಆರ್​ಪಿ ಕಂಡು ಅನೇಕರು ಅಚ್ಚರಿ ಪಟ್ಟಿದ್ದಾರೆ. ಬರೋಬ್ಬರಿ 13.5 ಟಿವಿಆರ್​ ಪಡೆದುಕೊಂಡಿರುವುದು ಈ ಧಾರಾವಾಹಿಯ ಹೆಚ್ಚುಗಾರಿಕೆ. ಕಿರುತೆರೆಗೆ ಕಮ್​ಬ್ಯಾಕ್​ ಮಾಡಿರುವ ಉಮಾಶ್ರೀ ಅವರಿಗೆ ಈ ಮೂಲಕ ಅಭೂತಪೂರ್ವ ಸ್ವಾಗತ ಸಿಕ್ಕಂತಾಗಿದೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಉಮಾಶ್ರೀ ಜತೆ ಮಂಜುಭಾಷಿಣಿ, ರಮೇಶ್ ಪಂಡಿತ್, ಕಾರ್ತಿಕ್ ಮಹೇಶ್, ಹಂಸ, ಸಾರಿಕಾ ರಾಜ್, ರೇಣುಕಾ, ಗುರು ಹೆಗಡೆ, ಸುನಂದಾ ಹೊಸಪೇಟೆ, ಹೊಸ ಕಲಾವಿದರಾದ ಸಂಜನಾ, ಅಕ್ಷರ, ಶಿಲ್ಪಾ, ನಿಶಾ, ಧನುಷ್ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂತೋಷ್ ಮತ್ತು ಗಜೇಂದ್ರ ಅಭಿನಯಿಸಿದ್ದಾರೆ.

ಈ ಧಾರಾವಾಹಿಯ ನಿರ್ಮಾಣದ ಹೊಣೆಯನ್ನು ಜೆಎಸ್ ಪ್ರೊಡಕ್ಷನ್ಸ್ ಸಂಸ್ಥೆ ಹೊತ್ತಿದೆ. ಸಹ ನಿರ್ಮಾಪಕರಾಗಿ ಪ್ರದೀಪ್ ಆಜ್ರಿ ಮತ್ತು ಪರೀಕ್ಷಿತ್ ಎಂ.ಎಸ್. ಕೈ ಜೋಡಿಸಿದ್ದಾರೆ. ಜೀ ಕನ್ನಡ ತಂಡದ ಕಥೆಗೆ ಸತ್ಯಕಿ ಚಿತ್ರಕತೆ ಮತ್ತು ಸಂಭಾಷಣೆ ಬರೆದಿದ್ದಾರೆ. ಇದರ ಶೀರ್ಷಿಕೆ ಗೀತೆ ಕೂಡ ಫೇಮಸ್​ ಆಗಿದೆ. ಹರ್ಷಪ್ರಿಯ ಅವರ ಸಾಹಿತ್ಯಕ್ಕೆ, ಖ್ಯಾತ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ರಾಗ ಸಂಯೋಜನೆ ಮಾಡಿದ್ದಾರೆ. ಈ ಹಾಡಿಗೆ ಪಂಚಮ ಜೀವ ಧ್ವನಿ ನೀಡಿದ್ದಾರೆ.

Leave a Comment

Your email address will not be published. Required fields are marked *