ಮಂಗಳೂರು: ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಅರೆಸ್ಟ್

ಮಂಗಳೂರು: ಕಳೆದ ವಾರ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ನಾಪತ್ತೆಯಾಗಿದ್ದ ಕಾಮುಕನಿಗೆ ಸ್ಥಳೀಯರು ಸರಿಯಾಗಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿಯಲ್ಲಿ ನಡೆದಿದೆ.

Ad Widget ... ..

ಬಂಧಿತನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಬೆಟ್ಟು ನಿವಾಸಿ ಮುಸ್ತಫ(18) ಎಂದು ಗುರುತಿಸಲಾಗಿದೆ.

Ad Widget

ಕಳೆದ ವಾರ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಮುಸ್ತಫಾ ನ ಗುರುತನ್ನು ಸ್ಥಳೀಯರು ಸಿಸಿಟಿವಿ ಮೂಲಕ ಕಂಡು ಹಿಡಿದಿದ್ದರು. ಇಂದು ಆರೋಪಿ ಮುಸ್ತಫಾ ಕೂಡಾ ಸ್ಕೂಟರಿನಲ್ಲಿ ಬಂದು ತಲಪಾಡಿ ಶ್ರೀ ರಾಮ ಭಜನಾ ಮಂದಿರದ ಬಳಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಲು ಯತ್ನಿಸಿದನೆನ್ನಲಾಗಿದೆ. ಈ ವೇಳೆ ಸ್ಥಳೀಯರು ಆತನನ್ನು ಹಿಡಿದು ಥಳಿಸಿ ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಕಳೆದೊಂದು ವಾರದಲ್ಲಿ ನಡೆದ ಈ ಎರಡು ಕಿರುಕುಳ ಕೃತ್ಯವನ್ನು ಆರೋಪಿ ಮುಸ್ತಫ ಎಸಗಿದ್ದನೆನ್ನಲಾಗಿದ್ದು, ಈ ಬಗ್ಗೆ ಸಂತ್ರಸ್ತೆ ಯುವತಿಯರು ನೀಡಿದ ದೂರಿನಂತೆ ಉಳ್ಳಾಲ ಪೊಲೀಸರು ಪೊಕ್ಸೋ ಸಹಿತ ಎರಡು ಪ್ರಕರಣಗಳು ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *