ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಿಧಾನಗತಿಯಲ್ಲಿ ಕೋವಿಡ್ ಸೋಂಕಿನ ಜೊತೆಗೆ ಓಮೈಕ್ರಾನ್ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಸೇರಿದಂತೆ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ.
ಮಧ್ಯಪ್ರದೇಶದಲ್ಲಿ ಒಂದೇ ಒಂದು ಪ್ರಕರಣಗಳು ದಾಖಲಾಗದಿದ್ದರೂ ಅಲ್ಲಿನ ಸರ್ಕಾರ ಮೂರು ದಿನಗಳ ಹಿಂದೆಯೇ ನೈಟ್ ಕಫ್ರ್ಯೂನ್ನು ಆದೇಶ ಹೊರಡಿಸಿದೆ.
ಇದೀಗ ರಾಜ್ಯದಲ್ಲೂ ನಿನ್ನೆ 400ಕ್ಕೂ ಹೆಚ್ಚು ಕೋವಿಡ್ ಸೋಂಕು ಪ್ರಕರಣಗಳು ಜೊತೆಗೆ ಓಮೈಕ್ರಾನ್ ಹೆಚ್ಚಾಗುತ್ತಿರುವ ಕಾರಣ ಈಗಿರುವ ನಿಬಂಧನೆಗಳ ಜೊತೆಗೆ ಬಿಗಿಯಾದ ಕ್ರಮಗಳನ್ನು ಜಾರಿಗೊಳಿಸಲು ತೀರ್ಮಾನಿಸಿದೆ.ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಮಹತ್ವದ ಸಭೆ ನಡೆಸಲಿದ್ದು, ನಂತರ ರಾಜ್ಯ ಸರ್ಕಾರ ತನ್ನ ನಿಲುವನ್ನು ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.