Ad Widget .

ಜನವರಿಯಿಂದ 15-18 ವರ್ಷದವರಿಗೆ ವ್ಯಾಕ್ಸಿನೇಷನ್‌- ಪ್ರಧಾನಿ ಮೋದಿ ಘೋಷಣೆ

ನವದೆಹಲಿ : ಜನವರಿ 3 ರಿಂದ 15-18 ವರ್ಷದ ಮಕ್ಕಳಿಗೆ ವ್ಯಾಕ್ಸಿನೇಷನ್ ಆರಂಭವಾಗಲಿದೆ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.

Ad Widget . Ad Widget .

ದೇಶದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಅಟ್ಟಹಾಸ ಮೆರೆಯುತ್ತಿದ್ದು, ಇಂತಹ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು.

Ad Widget . Ad Widget .

ವಿಶ್ವದಾದ್ಯಂತ ಒಮಿಕ್ರಾನ್ ಸೋಂಕು ಹೆಚ್ಚಾಗುತ್ತಿದೆ ದೇಶದಲ್ಲಿ ಒಮಿಕ್ರಾನ್ ಸೋಂಕು ನಮ್ಮನ್ನು ಕಾಡುತ್ತಿದೆ. ಕೊರೊನಾ ರೂಪಾಂತರಿಯಾಗಿ ಪರಿವರ್ತನೆ ಹೊಂದುತ್ತಿದೆ. ಹೆಚ್ಚುವರಿ ಐಸಿಯು, ಆಕ್ಸಿಜನ್ ಬೆಡ್‌ಗಳನ್ನು ಸಿದ್ಧಪಡಿಸಿದ್ದೇವೆ . ಜನವರಿ 3 ರಿಂದ 15-18 ವರ್ಷದ ಮಕ್ಕಳಿಗೆ ವ್ಯಾಕ್ಸಿನೇಷನ್ ಆರಂಭವಾಗಲಿದೆ , ಕೊರೊನಾ ವಿರುದ್ಧ ಭಾರತದ ಹೋರಾಟ ನಿಲ್ಲವುದಿಲ್ಲ ಎಂದಿದ್ದಾರೆ.

ಭಾರತದ ದೊಡ್ಡ ಜನಸಂಖ್ಯೆಯಲ್ಲಿ ಬಹುತೇಕರಿಗೆ ಎರಡು ಡೋಸ್ ಲಸಿಕೆಗಳು ಸಿಕ್ಕಿವೆ. ವಿಶ್ವದಲ್ಲಿ ಅತಿಹೆಚ್ಚು ಜನರಿಗೆ ನಾವು ಲಸಿಕೆ ನೀಡಿದ್ದೇವೆ . ದೇಶದ ಎಲ್ಲ ನಾಗರಿಕರ ಸಾಮೂಹಿಕ ಪರಿಶ್ರಮದಿಂದ 100 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಲು ಸಾಧ್ಯವಾಗಿದೆ. ಈಗ ಎಚ್ಚರಿಕೆ ವಹಿಸುವುದು ಬಹಳ ಅಗತ್ಯವಾಗಿದೆ. ಎಲ್ಲರಿಗೂ ಗೊತ್ತಿದೆ ಕೊರೊನಾ ಹೋಗಿದೆ ಎಂಬುದು. ಕೊರೊನಾ ವಿರುದ್ಧ ಭಾರತ ಹೋರಾಟ ಮುಂದುವರೆಯುತ್ತಿದೆ. ಕೊರೊನಾ ಇನ್ನೂ ಕೂಡ ನಮ್ಮಿಂದ ದೂರ ಆಗಿಲ್ಲ. 12 ತಿಂಗಳಿನಿಂದ ವ್ಯಾಕ್ಸಿನೇಷನ್ ಆರಂಭವಾಗಿದೆ. ವ್ಯಾಕ್ಸಿನ್ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ. ಕೊರೊನಾ ವಿರುದ್ಧ ಭಾರತದ ಹೋರಾಟ ನಿಲ್ಲವುದಿಲ್ಲ ಎಂದರು.

Leave a Comment

Your email address will not be published. Required fields are marked *