Ad Widget .

ಡೆತ್ ನೋಟ್ ಬರೆದಿಟ್ಟು ಸಾವಿನ ಮೊರೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ| ಮಗನ ಅಂತ್ಯಸಂಸ್ಕಾರಕ್ಕೆ ಬರಲೂ ಹಣವಿಲ್ಲದ ಹೆತ್ತವರು|

Ad Widget . Ad Widget .

ಮಂಗಳೂರು: ಶೈಕ್ಷಣಿಕ ಸಾಲಕ್ಕೆ ಹೆದರಿ ಇಂಜಿನಿಯರಿಂಗ್ ವಿಧ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

Ad Widget . Ad Widget .

ಮೃತ ವಿಧ್ಯಾರ್ಥಿಯನ್ನು ಬಿಹಾರದ ಪಾಟ್ನಾ ಮೂಲದ ಸೌರವ್‌ (19) ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌‌ನ ಎನ್‌ಐಟಿಕೆಯಲ್ಲಿ ಇಂಜಿನಿಯರಿಂಗ್‌ ವಿಧ್ಯಾಭ್ಯಾಸ ಮಾಡುತ್ತಿದ್ದ, ಈತ ಆತ್ಮಹತ್ಯೆಗೂ ಮುನ್ನ ಡೆತ್‌ ನೋಟ್‌ ಬರೆದಿಟ್ಟಿದ್ದು, ಆರ್ಥಿಕ ಸಮಸ್ಯೆಯ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿದ್ದ ಎನ್ನಲಾಗಿದೆ.

ಡೆತ್ ನೋಟ್ ನಲ್ಲಿ ನಾನು ಶಿಕ್ಷಣಕ್ಕಾಗಿ ಸಾಲಮಾಡಿಕೊಂಡಿದ್ದು, ಅಲ್ಲದೆ ನನ್ನ ಮೆದುಳಿನಲ್ಲಿ ಕೆಮಿಕಲ್‌‌ ರಿಯಾಕ್ಷನ್‌‌‌ ಆಗುತ್ತಿದೆ. ಸಾಲವನ್ನು ಆದಷ್ಟು ಬೇಗ ತಿರಿಸಿ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾನೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಆತ ರೂಂನ ಬಾಗಿಲು ತೆರೆಯದ ಹಿನ್ನೆಲೆ 9.30ರ ರ ವೇಳೆಗೆ ಕಿಟಿಕಿಯಿಂದ ನೋಡಿದಾಗ ಆತ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಘಟನೆಯ ಬಗ್ಗೆ ಸುರತ್ಕಲ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಡತನದಿಂದ ಮಗನ ಅಂತ್ಯಸಂಸ್ಕಾರಕ್ಕೆ ಬಿಹಾರದಿಂದ ಮಂಗಳೂರಿಗೆ ಬರಲು ಸಾಧ್ಯವಾಗುತ್ತಿಲ್ಲ, ನೀವೇ ಅಂತ್ಯಕ್ರಿಯೆ ನಡೆಸಿ ಎಂದು ಅಧಿಕಾರಿಗಳಿಗೆ ಪೋಷಕರು ಮನವಿ ಮಾಡಿದ್ದರು. ಆದರೆ ಕಾಲೇಜು ಆಡಳಿತ ಮಂಡಳಿ, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸೌರವ್ ಪೋಷಕರ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದ್ದಾರೆ.

ಪಾರ್ಥಿವ ಶರೀರವನ್ನು ಮನೆಗೆ ಸ್ಥಳಾಂತರಿಸುವ ವ್ಯವಸ್ಥೆಯನ್ನು ಸಹ ಮಾಡಿದ್ದಾರೆ. ಸುರತ್ಕಲ್ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *