Ad Widget .

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ಮಾಡಿದ ಬಾಲಕರು| 6 ಮಂದಿ ಅಪ್ರಾಪ್ತರು ವಶಕ್ಕೆ|

Ad Widget . Ad Widget .

ಧಾರವಾಡ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ ಧಾರವಾಡದಲ್ಲಿ 6 ಮಂದಿ ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget . Ad Widget .

ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 17 ವರ್ಷದ ಆರು ಬಾಲಕರನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.

ಶನಿವಾರ ಈ ಘಟನೆಯ ಕುರಿತು ಬಾಲಕಿಯ ಪೋಷಕರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

‘ಖಾಸಗಿ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರು ಮಂದಿ ಬಾಲಕರನ್ನು ವಶಕ್ಕೆ ಪಡೆದು ವಿಚಾರಿಸಲಾಯಿತು. ಬೇರೆ ಬೇರೆ ಸ್ಥಳಗಳಲ್ಲಿ ಮೂರು ತಿಂಗಳ ಕಾಲ ಈ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅಲ್ಲದೇ ಈ ಕೃತ್ಯವನ್ನು ಗೋಪ್ಯವಾಗಿಡಲು ಬಾಲಕಿಗೆ ಆರೋಪಿಗಳು ಪ್ರಾಣ ಬೆದರಿಕೆ ಒಡ್ಡಿದ್ದರು. ಅಲ್ಲದೆ ಅತ್ಯಾಚಾರದ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಮೊದಲ ಘಟನೆ ಆಗಸ್ಟ್ ತಿಂಗಳಲ್ಲಿ ನಡೆದಿದ್ದು, ವಿಡಿಯೋ ಭಯದಿಂದ ಬಾಲಕಿ ಯಾರ ಬಳಿಯೂ ಈ ಬಗ್ಗೆ ಹೇಳಿಕೊಂಡಿರಲಿಲ್ಲ. ಆದರೆ ಅತ್ಯಾಚಾರದ ವಿಡಿಯೋ ಇದೀಗ ವೈರಲ್ ಆಗಿದೆ. ಹೀಗಾಗಿ ಬಾಲಕಿ ಇದೀಗ ಪೊಲೀಸರ ಮೊರೆ ಹೋಗಿದ್ದು, ಪ್ರಸ್ತುತ ಬಾಲಕಿಯನ್ನು ಜಿಲ್ಲಾ ಆಸ್ಪತ್ರೆ ಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಅತ್ಯಾಚಾರಿಗಳು ಸಂತ್ರಸ್ಥೆಗೆ ಪರಿಚಿತರಾಗಿದ್ದು, ಅವರ ವಿವರಗಳನ್ನು ಸಂಗ್ರಹಿಸಲಾಗಿದೆ. ಆರೋಪಿಗಳು ಮತ್ತು ಸಂತ್ರಸ್ತ ಬಾಲಕಿ ಇಬ್ಬರೂ ಅಪ್ರಾಪ್ತರಾಗಿರುವುದರಿಂದ ನಾವು ಪ್ರಕರಣದ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಪ್ರಸ್ತುತ, ಪೊಲೀಸ್ ತಂಡವು ಶಂಕಿತರನ್ನು ತನಿಖೆ ಮತ್ತು ವಿಚಾರಣೆ ನಡೆಸುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂತ್ರಸ್ತೆಯ ಹೇಳಿಕೆಯ ಪ್ರಕಾರ ಆರೋಪಿಗಳು ವಿದ್ಯಾರ್ಥಿಗಳು ಅಥವಾ ಶಾಲೆ ಬಿಟ್ಟವರು ಎಂದು ಪೊಲೀಸರು ತಿಳಿಸಿದ್ದಾರೆ. ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *