ಮಂಗಳೂರು: ಕೊರೊನಾ ರೂಪಾಂತರಿ ಓಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರಿನ ಪಣಂಬೂರು, ತಣ್ಣೀರುಬಾವಿ, ಸುರತ್ಕಲ್ ಸೇರಿದಂತೆ ಪ್ರಮುಖ ಬೀಚ್‌ಗಳಿಗೆ ಡಿ.31ರ ಶುಕ್ರವಾರದಂದು ಸಂಜೆ 7 ಗಂಟೆಯ ಬಳಿಕ ಹೋಗುವುದು ಹಾಗೂ ಅಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಲಾಗಿದೆ” ಎಂದು ದ.ಕ. ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ. ವಿ ಹೇಳಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದ್ದು, ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆವರೆಗೆ ಜನ ಸಂಚಾರಕ್ಕೆ ನಿಷೇಧ ವಿಧಿಸಲಾಗಿದೆ. ಆದರೆ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕತ್ತಲಾದ ಬಳಿಕ ಬೀಚ್ ಬಳಿ ಸಾರ್ವಜನಿಕರು ದಟ್ಟವಾಗಿ ಸೇರಬಹುದಾದ ಕಾರಣದಿಂದಾಗಿ ಜಿಲ್ಲಾಧಿಕಾರಿ ನಿಷೇಧ ಹೇರಿದ್ದಾರೆ.
“ಬೀಚ್ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷಾಚರಣೆ ನಡೆಸಬಾರದು” ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಕೂಡ ನಿಷೇಧ ವಿಧಿಸಿದ್ದಾರೆ.