ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ವಿಧಿವಶ
ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಕನ್ನಡದ ಪ್ರಖ್ಯಾತ ಬರಹಗಾರ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ಪತ್ನಿ ರಾಜೇಶ್ವರಿ ತೇಜಸ್ವಿಯವರು (84) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಜಲಕ್ಷ್ಮಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ತೇಜಸ್ವಿಯವರ ನಿಧನದ ಬಳಿಕ ರಾಜೇಶ್ವರಿಯವರು ಮೂಡಿಗೆರೆಯಲ್ಲೇ ನೆಲೆಸಿದ್ದರು. ಕೆಲವು ದಿನಗಳ ಹಿಂದೆ ಬೆಂಗಳೂರಿಗೆ ಮಗಳ ಮನೆಗೆ ಬಂದಿದ್ದರು. ರಾಜೇಶ್ವರಿ ತೇಜಸ್ವಿ- 1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯಂ ಹೊಸ ಬಡಾವಣೆಯಲ್ಲಿ ತೀರಾ ಸಾಮಾನ್ಯ ಕುಟುಂಬದಲ್ಲಿ […]
ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ವಿಧಿವಶ Read More »