December 2021

ಕನ್ನಡದ ಹಿರಿಯ ನಟ ಶಿವರಾಂ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್‍ವುಡ್‍ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಶಿವರಾಂ ಇಂದು ವಿಧಿವಶಯಾಗಿದ್ದರೆ. ಕೆಲವು ದಿನಗಳಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡುಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಶಿವರಾಂ ಅವರಿಗೆ 84 […]

ಕನ್ನಡದ ಹಿರಿಯ ನಟ ಶಿವರಾಂ ವಿಧಿವಶ Read More »

ಟೆಸ್ಟ್ ಕ್ರಿಕೆಟ್ ನಲ್ಲಿ 10 ವಿಕೆಟ್ ಕಬಳಿಸಿ ದಾಖಲೆ ಬರೆದ ಅಜಾಜ್ ಪಟೇಲ್|

ಮುಂಬೈ ಮೂಲದ ನ್ಯೂಜಿಲೆಂಡ್​ ಸ್ಪಿನರ್​ ಅಜಾಜ್​​ ಪಟೇಲ್​​ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಟೆಸ್ಟ್​ ಪಂದ್ಯದ ಒಂದೇ ಇನ್ನಿಂಗ್ಸ್​​ನಲ್ಲಿ 10 ವಿಕೆಟ್​ ಪಡೆದ ವಿಶ್ವದ ಮೂರನೇ ಕ್ರಿಕೆಟಿಗ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಜಿಮ್​ ಲೇಖರ್​ ಹಾಗೂ ಅನಿಲ್​​ ಕುಂಬ್ಳೆ ಕೂಡ ಟೆಸ್ಟ್​ ಇತಿಹಾಸದಲ್ಲಿ ಈ ಸಾಧನೆ ಮಾಡಿದ್ದಾರೆ. ಇದೀಗ ಈ ಸಾಲಿಗೆ ಅಜಾಜ್​ ಪಟೇಲ್​ ಕೂಡ ಸೇರಿದ್ದಾರೆ. ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್​ ನಡುವಿನ ಮೊದಲ ಇನ್ನಿಂಗ್ಸ್​ ಟೆಸ್ಟ್​ನ ಎರಡನೆ ದಿನವಾದ ಇಂದು ಮೊಹಮ್ಮದ್​ ಸಿರಾಜ್​ ವಿಕೆಟ್​ನ್ನು ಕಿತ್ತುಕೊಳ್ಳುವ

ಟೆಸ್ಟ್ ಕ್ರಿಕೆಟ್ ನಲ್ಲಿ 10 ವಿಕೆಟ್ ಕಬಳಿಸಿ ದಾಖಲೆ ಬರೆದ ಅಜಾಜ್ ಪಟೇಲ್| Read More »

ಪುತ್ತೂರು: ಸ್ಕೂಟರ್ ಢಿಕ್ಕಿ ಹೊಡೆದು ಪಾದಚಾರಿ ಸಾವು

ಪುತ್ತೂರು: ನಗರದ ಪೋಲಿಸ್ ಠಾಣಾ ಮುಂಭಾಗ ನಡೆದುಕೊಂದು ಹೋಗುತ್ತಿದ್ದ ವ್ಯಕ್ರಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಚಿಕ್ಕಪುತ್ತೂರಿನ ಕೇಶವ ಎಂದು ಗುರುತಿಸಲಾಗಿದೆ. ಇವರು ಪುತ್ತೂರು ಹೆಗ್ಡೆ ಆರ್ಕೇಡ್ ಮುಂಭಾಗದಿಂದ ಮನೆಗೆ ನಡೆದುಕೊಂಡು ಹೋಗುತಿದ್ದ ವೇಳೆ ಸ್ಕೂಟರೊಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ರಸ್ತೆಗೆಸೆಯಲ್ಪಟ್ಟ ಕೇಶವ ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ

ಪುತ್ತೂರು: ಸ್ಕೂಟರ್ ಢಿಕ್ಕಿ ಹೊಡೆದು ಪಾದಚಾರಿ ಸಾವು Read More »

ತೆಂಗಿನಕಾಯಿ ಏಟಿಗೆ ಬಿರುಕು ಬಿಟ್ಟ ರಸ್ತೆ..! 1.16 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ ವೇಳೆ ಶಾಸಕಿ ಗರಂ|

ಲಖನೌ: ಉತ್ತರ ಪ್ರದೇಶದ ಬಿಜನೋರ್‌ ಸದಾರ್‌ನಲ್ಲಿ ಸುಮಾರು ₹1.16 ಕೋಟಿ ವೆಚ್ಚದಲ್ಲಿ ನಿರ್ಮಿಸಿದ 7 ಕಿ.ಮೀ. ರಸ್ತೆಯೊಂದರ ಉದ್ಘಾಟನೆ ವೇಳೆ ಸಾಂಪ್ರದಾಯಿಕವಾಗಿ ತೆಂಗಿನಕಾಯಿ ಒಡೆದಾಗ ಅದು ಹೋಳಾಗದೆ ರಸ್ತೆಗೇ ಹಾನಿಯಾದ ಘಟನೆ ನಡೆದಿದೆ. ಗುರುವಾರ ಸಂಜೆ ಉದ್ಘಾಟನೆಗೆ ಬಂದಿದ್ದ ಬಿಜನೋರ್‌ ಸದಾರ್‌ ಕ್ಷೇತ್ರದ ಬಿಜೆಪಿ ಶಾಸಕಿ ಸುಚಿ ಮೌಸಮ್‌ ಚೌಧರಿ ಅವರು ತೆಂಗಿನಕಾಯಿ ಒಡೆಯುವ ಪ್ರಹಸನದ ಬಳಿಕ ಸ್ಥಳದಲ್ಲೇ ಧರಣಿ ಕುಳಿತಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದ ಶಾಸಕಿ ಸುಚಿ ಅವರು ಕಳಪೆ ಕಾಮಗಾರಿ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ತೆಂಗಿನಕಾಯಿ ಏಟಿಗೆ ಬಿರುಕು ಬಿಟ್ಟ ರಸ್ತೆ..! 1.16 ಕೋಟಿ ವೆಚ್ಚದ ಕಾಮಗಾರಿ ಉದ್ಘಾಟನೆ ವೇಳೆ ಶಾಸಕಿ ಗರಂ| Read More »

ಎಸ್ ಎಸ್ ಎಲ್ ಸಿ 20% ಪಠ್ಯ ಕಡಿತಗೊಳಿಸಿದ ಶಿಕ್ಷಣ ಇಲಾಖೆ

ಬೆಂಗಳೂರು : 2021-22 ನೇ ಸಾಲಿನ ಎಸ್‌ಎಸ್‌ಎಲ್ ಸಿಯ ಶೇ. 20 ರಷ್ಟು ಪಠ್ಯ ಕಡಿತಗೊಳಿಸಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಆದೇಶ ಹೊರಡಿಸಿದೆ. ಕೋವಿಡ್ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ 2021-22 ನೇ ಸಾಲಿಗೆ ಪರೀಕ್ಷೆಗೆ ಪರಿಗಣಿಸಬಹುದಾದ ಮತ್ತು ಪರಿಗಣಿಸಬಾರದ ಪಠ್ಯಗಳ ಪಟ್ಟಿಯನ್ನು ಡಿಎಸ್ ಇಆರ್ ಟಿ ಬಿಡುಗಡೆ ಮಾಡಿದೆ. ಸರ್ಕಾರ ಈ ಹಿಂದೆ ಆದೇಶಿಸಿದ್ದಂತೆ ಶೇ. 20 ರಷ್ಟು ಪಠ್ಯ ಕಡಿಗೊಳಿಸಲಾಗಿದ್ದು, ಶಿಕ್ಷಕರು ವಿದ್ಯಾರ್ಥಿಗಳಿಗೆ ಬೋಧನೆ ಮಾಡಬೇಕಾದ ಉಳಿದ ಶೇ.80 ರಷ್ಟು

ಎಸ್ ಎಸ್ ಎಲ್ ಸಿ 20% ಪಠ್ಯ ಕಡಿತಗೊಳಿಸಿದ ಶಿಕ್ಷಣ ಇಲಾಖೆ Read More »

ಸುಳ್ಯ: ಟ್ರಾವೆಲ್ಲರ್ ಮತ್ತು ಬೈಕ್ ನಡುವೆ ಅಪಘಾತ| ಸವಾರ ಸಾವು

ಸುಳ್ಯ: ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೊ ಟ್ರಾವೆಲರ್ ಗೂಡ್ಸ್ ಗಾಡಿಗೆ ಸಂಪಾಜೆ ಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಯಾಗಿ ಸವಾರ ಮೃತ ಪಟ್ಟ ಘಟನೆ ಗೂನಡ್ಕ ಸಮೀಪ ಪೇಲ್ತಡ್ಕ ದಿಂದ ವರದಿಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಸುಳ್ಯ ಕಸಬಾ ದುಗ್ಗಲಡ್ಕ ಕಂದಡ್ಕ ವಿನೋದ್ ಕುಮಾರ್ (23) ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಸುಳ್ಯ: ಟ್ರಾವೆಲ್ಲರ್ ಮತ್ತು ಬೈಕ್ ನಡುವೆ ಅಪಘಾತ| ಸವಾರ ಸಾವು Read More »

ಬೆಂಗಳೂರು : ನಾಪತ್ತೆಯಾಗಿದ್ದ ದಕ್ಷಿಣ ಆಫ್ರಿಕಾದ 10 ಮಂದಿ ಪ್ರಯಾಣಿಕರಲ್ಲಿ 9 ಮಂದಿ ಪತ್ತೆ

ಬೆಂಗಳೂರು : ಕೊರೊನಾ ರೂಪಾಂತರಿ ಒಮಿಕ್ರಾನ್ (Omicron)ಸೋಂಕು ದಕ್ಷಿಣ ಆಫ್ರಿಕಾದಲ್ಲಿ ಮೊದಲು ಕಾಣಿಸಿಕೊಂಡ ಬಳಿಕ ಅಲ್ಲಿಂದ ಬೆಂಗಳೂರಿಗೆ ಬಂದಿದ್ದ 10 ಮಂದಿ ಪ್ರಯಾಣಿಕರು ನಾಪತ್ತೆಯಾಗಿದ್ದರು. ಇದೀಗ ಬಿಬಿಎಂಪಿ ಸಿಬ್ಬಂದಿ 9 ಮಂದಿಯನ್ನು ಪತ್ತೆ ಹಚ್ಚಿದ್ದಾರೆ. ಒಮಿಕ್ರಾನ್ ಸೋಂಕಿನ ಆತಂಕದ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ವಿದೇಶದಿಂದ ಬಂದವರಿಗೆ ಕೋವಿಡ್ ಟೆಸ್ಟ್ ನಡೆಸಲಾಗುತ್ತಿದೆ. ಈ ವೇಳೆ ದಕ್ಷಿಣ ಆಫ್ರಿಕಾದಿಂದ ಬಂದಿದ್ದ 10 ಮಂದಿ ಪ್ರಯಾಣಿಕರು ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ 10 ಮಂದಿ ಪ್ರಯಾಣಿಕರ ಪೈಕಿ ಇದೀಗ

ಬೆಂಗಳೂರು : ನಾಪತ್ತೆಯಾಗಿದ್ದ ದಕ್ಷಿಣ ಆಫ್ರಿಕಾದ 10 ಮಂದಿ ಪ್ರಯಾಣಿಕರಲ್ಲಿ 9 ಮಂದಿ ಪತ್ತೆ Read More »

ಕೋಮು ಪ್ರಚೋದನಕಾರಿ ಭಾಷಣ ಆರೋಪ| ಎಸ್ಡಿಪಿಐ, ಪಿಎಫ್ ಐ ಸಂಘಟಕರ ವಿರುದ್ಧ ದೂರು

ಪುತ್ತೂರು: ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ನೀಡಿರುವ ದೂರಿನ ಮೇರೆಗೆ ಎಸ್.ಡಿ.ಪಿ.ಐ. ಮತ್ತು ಸಿ.ಎಫ್.ಐ. ಸಂಘಟಕರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಮು ಭಾವನೆ ಕೆರಳಿಸಿ ವಿದ್ಯಾರ್ಥಿಗಳ ನಡುವೆ ಗಲಭೆ ನಡೆಸಲು ಉತ್ತೇಜನ ಹಾಗೂ ಸಾಮಾಜಿಕ ಸ್ವಾಸ್ಥ್ಯ ನಾಶ ಮಾಡಿ ಧರ್ಮದ ಆಧಾರದಲ್ಲಿ ಶಾಲಾ ಕಾಲೇಜುಗಳಲ್ಲಿ ಗಲಭೆ ನಡೆಸಲು ಪ್ರಚೋದನೆ ನಡೆಸುವಂತೆ ಭಾಷಣ ಮಾಡಿರುವುದು ಅಲ್ಲದೆ ಹಿಂದೂ ಮುಖಂಡರ ವಿರುದ್ಧ ಕೀಳು ಮಟ್ಟದ ಶಬ್ದಗಳಲ್ಲಿ ಮಾತನಾಡಿರುವುದಾಗಿ ಮತ್ತು ಕಾಲೇಜಿನ ಒಳಗಡೆ ಅಕ್ರಮ

ಕೋಮು ಪ್ರಚೋದನಕಾರಿ ಭಾಷಣ ಆರೋಪ| ಎಸ್ಡಿಪಿಐ, ಪಿಎಫ್ ಐ ಸಂಘಟಕರ ವಿರುದ್ಧ ದೂರು Read More »

ಒಮಿಕ್ರಾನ್ ಹಿನ್ನಲೆ| ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿಗೆ

ಬೆಂಗಳೂರು: ರಾಜ್ಯದ ಜನತೆ ಕರೋನ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇಂದು ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಸಿಎಂ ಈ ಬಗ್ಗೆ ಜನತೆಗೆ ಮನದಟ್ಟು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಕಂದಾಯ ಮಂತ್ರಿ ಆರ್.ಅಶೋಕ್ ಹೇಳಿದ್ದಾರೆ. ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ ಒಮಿಕ್ರಾನ್ ತಡೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಜ್ಞರೊಂದಿಗೆ ಮಹತ್ವದ ಸಭೆ ನಡೆಸಿ ಈ ಬಗ್ಗೆ ತೀರ್ಮಾನವನ್ನು

ಒಮಿಕ್ರಾನ್ ಹಿನ್ನಲೆ| ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿಗೆ Read More »

ಬ್ಲೌಸ್ ರೀತಿಯಲ್ಲಿ ಟ್ಯಾಟೂ ಹಾಕಿಸಿಕೊಂಡ ಸುಂದರಿ..! ಸೆರಗು ಜಾರಿದರೆ ಗತಿಯೇನು?

ಡಿಜಿಟಲ್ ಡೆಸ್ಕ್: ಇಂದಿನ ನಾರೀಮಣಿಯರು ತಮ್ಮ ದೇಹ ಸೌಂದರ್ಯ ಹೆಚ್ಚಿಸಿಕೊಳ್ಳಲು ಸೀರೆಗೆ ತರ ತರದ ಡಿಸೈನ್ ಬ್ಲೌಸ್ ಹಾಕೋದು, ಬ್ಲೌಸ್ ಗೆ ವಿವಿಧ ಅಲಂಕಾರ ಮಾಡಿಸೋದನ್ನು ಕಂಡಿರುತ್ತೀರಿ. ಆದರೆ ಇಲ್ಲೊಬ್ಬ ಸುಂದರಿ ಮಾತ್ರ ಸೀರೆ ಬ್ಲೌಸ್ ಹಾಕೋದನ್ನೇ ಮರೆತು ಬಿಟ್ಟಿದ್ದಾಳೆ. ಆದರೆ ನೋಡುಗರು ಮಾತ್ರ‌ ಮೈಮುಚ್ಚಿದ ಟ್ಯಾಟೂ ನೋಡಿ ಕನ್ ಪ್ಯೂಸ್ ಆಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಫುಲ್ ಹವಾ ಎಬ್ಬಿಸಿರುವ ವೈರಲ್ ವೀಡಿಯೋ ವೊಂದು ಪಡ್ಡೆ ಹೈಕಳ ನಿದ್ದೆಗೆಡಿಸಿದೆ. ಅಷ್ಟೇ ಅಲ್ಲ, ಫ್ಯಾಶನ್ ಅಂದ್ರೇ ಹಿಂಗೂ ಇರುತ್ತಾ

ಬ್ಲೌಸ್ ರೀತಿಯಲ್ಲಿ ಟ್ಯಾಟೂ ಹಾಕಿಸಿಕೊಂಡ ಸುಂದರಿ..! ಸೆರಗು ಜಾರಿದರೆ ಗತಿಯೇನು? Read More »