December 2021

ಮಂಗಳೂರು: ಮೀನುಗಾರನನ್ನು ಉಲ್ಟಾ ನೇತು ಹಾಕಿ ಹಲ್ಲೆ

ಮಂಗಳೂರು: ಮಂಗಳೂರಿನಲ್ಲಿ ಮೀನುಗಾರನೋರ್ವನನ್ನು ಉಲ್ಟಾ ನೇತು ಹಾಕಿ ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ ಮಂಗಳೂರಿನ ಧಕ್ಕೆಯಲ್ಲಿ ಈ ಘಟನೆ ನಡೆದಿದ್ದು ಮೊಬೈಲ್ ಕದ್ದಿದ್ದಾನೆ ಎಂಬ ಆರೋಪ ಮಾಡಿ ಆಂದ್ರಪ್ರದೇಶದ ಮೂಲದ ವೈಲ ಶೀನು (34) ಎಂಬಾತನಿಗೆ ಹಲ್ಲೆ ಮಾಡಲಾಗಿದೆ. ವೈಲ ಶೀನು ಎಂಬಾತನ ಕಾಲಿಗೆ ಹಗ್ಗದಿಂದ ಕಟ್ಟಿ ಆತನನ್ನು ತಲೆಕೆಳಗು ಮಾಡಿ ನೇತು ಹಾಕಿ ಹಲ್ಲೆ ನಡೆಸಲಾಗಿದೆ. ಈ ವಿಡಿಯೋ ಪೊಲೀಸರ ಕೈಗೆ ಸಿಕ್ಕಿದ್ದು ಇವರೆಲ್ಲರೂ ಆಂಧ್ರಪ್ರದೇಶದ ಮೀನುಗಾರರು ಎಂದು ತಿಳಿದುಬಂದಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ […]

ಮಂಗಳೂರು: ಮೀನುಗಾರನನ್ನು ಉಲ್ಟಾ ನೇತು ಹಾಕಿ ಹಲ್ಲೆ Read More »

1.5 ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ವಶ| ಆರು ಮಂದಿ ಬಂಧನ

ಹೊಸಪೇಟೆ: ವಿಜಯನಗರ ಜಿಲ್ಲೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದೂವರೆ ಕೋಟಿ ರೂಪಾಯಿ ಮೌಲ್ಯದ ಅಂಬರ್ ಗ್ರೀಸ್(ತಿಮಿಂಗಿಲ ವಾಂತಿ) ವಶಕ್ಕೆ ಪಡೆಯಲಾಗಿದೆ. ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರು ಜನರನ್ನು ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳದ ವೆಂಕಟೇಶ್, ಅಬ್ದುಲ್ ವಹಾಬ್, ಮಹೇಶ್, ಭಟ್ಕಳದ ಗಣಪತಿ, ಹುಬ್ಬಳ್ಳಿಯ ಪುಂಡಲೀಕ, ವಿಜಯಪುರದ ಶ್ರೀಧರ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಒಂದೂವರೆ ಕೆಜಿಯಷ್ಟು ತಿಮಿಂಗಿಲದ ವಾಂತಿ ವಶಕ್ಕೆ ಪಡೆದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

1.5 ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ವಶ| ಆರು ಮಂದಿ ಬಂಧನ Read More »

ಸುಬ್ರಹ್ಮಣ್ಯ ರೈಲ್ವೆ ನಿಲ್ದಾಣ| ಮೂಲಭೂತ ಸೌಕರ್ಯಗಳೇ ಮರೀಚಿಕೆ|

ಸುಳ್ಯ: ರಾಜ್ಯದಲ್ಲಿ ಹೆಚ್ಚಿನ ಪ್ರಯಾಣಿಕರು ಸಂಪರ್ಕಿಸುವ ರೈಲು ನಿಲ್ದಾಣಗಳ ಸಾಲಿನಲ್ಲಿ ಬರುವ ಸುಬ್ರಹ್ಮಣ್ಯದ ನೆಟ್ಟಣ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕುಂಠಿತವಾಗಿ ಪ್ರಯಾಣಿಕರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರಸಿದ್ಧ ಯಾತ್ರಾ ಕ್ಷೇತ್ರಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯವನ್ನು ಸಂಪರ್ಕಿಸುವ ರೈಲುಮಾರ್ಗದ ಮುಖಾಂತರ ಆಗಮಿಸುವ ಪ್ರವಾಸಿಗರು ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ಇಳಿಯಬೇಕಾಗುತ್ತದೆ. ಆದರೆ ಸರಿಯಾದ ಮೂಲಸೌಕರ್ಯ ಇರದ ಕಾರಣಕ್ಕೆ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಸಾರ್ವಜನಿಕರಿಂದ ಆಗ್ರಹ ವ್ಯಕ್ತವಾಗಿದೆ. ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ

ಸುಬ್ರಹ್ಮಣ್ಯ ರೈಲ್ವೆ ನಿಲ್ದಾಣ| ಮೂಲಭೂತ ಸೌಕರ್ಯಗಳೇ ಮರೀಚಿಕೆ| Read More »

‘ಸ್ನೇಹಕ್ಕೂ ಬದ್ಧ, ಸಮರಕ್ಕೂ ಸಿದ್ಧ’| ಎಂಇಎಸ್ ಪುಂಡರ ವಿರುದ್ಧ ಗುಡುಗಿದ ಸಿಎಂ ಬೊಮ್ಮಾಯಿ|

ಬೆಳಗಾವಿ : ಸ್ನೇಹಕ್ಕೆ ಬದ್ಧ, ಸಮರಕ್ಕೆ ಸಿದ್ಧ ಎನ್ನುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂಇಎಸ್‌ ಪುಂಡರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ, ‘ಸೂರ್ಯಚಂದ್ರರಿವವರೆಗೂ ಬೆಳಗಾವಿ ನಮ್ಮದೇ ಆಗಿರುತ್ತೆ.ಬೆಳಗಾವಿಯಲ್ಲಿ ಎಂದೆಂದಿಗೂ ಕನ್ನಡಿಗನೇ ಸಾರ್ವಭೌಮನಾಗಿರತ್ತಾನೆ. ಯಾಕಂದ್ರೆ, ಬೆಳಗಾವಿ ಕರ್ನಾಟಕದ ಮತ್ತೊಂದು ಶಕ್ತಿಕೇಂದ್ರ. ಹಾಗಾಗಿನೇ ಇಲ್ಲಿ ಸುವರ್ಣಸೌಧ ನಿರ್ಮಿಸಲಾಗಿದೆ’ ಎಂದರು. ಇನ್ನು‌ ಈ ವೇಳೆ ಎಂಇಎಸ್ ಪುಂಡರಿಗೆ ಖಡಕ್‌ ಎಚ್ಚರಿಕೆ ನೀಡಿದ ಸಿಎಂ,’ ನಾವು ಕನ್ನಡಿಗರು ಸ್ನೇಹಕ್ಕೆ ಬದ್ಧ, ಸಮರಕ್ಕೆ ಸಿದ್ಧ.

‘ಸ್ನೇಹಕ್ಕೂ ಬದ್ಧ, ಸಮರಕ್ಕೂ ಸಿದ್ಧ’| ಎಂಇಎಸ್ ಪುಂಡರ ವಿರುದ್ಧ ಗುಡುಗಿದ ಸಿಎಂ ಬೊಮ್ಮಾಯಿ| Read More »

ಬೆಳ್ತಂಗಡಿ: ಪತ್ನಿಯನ್ನು ತವರಿಗೆ ಕಳುಹಿಸಿ ಪತಿ ಹೋಗಿದ್ದೆಲ್ಲಿಗೆ?| ಅನುಮಾನಗೊಂಡ ಪತ್ನಿಯಿಂದ ದೂರು|h

ಬೆಳ್ತಂಗಡಿ. ಹೆಂಡತಿ ತವರು ಮನೆಗೆ ಹೋಗಿದ್ದ ಸಂದರ್ಭ ಪತಿಯೋರ್ವ ಇದ್ದಕ್ಕಿದ್ದಂತೆ ಕಾಣೆಯಾದ ಘಟನೆ ತಾಲೂಕಿನ ಕುವೆಟ್ಟು ಎಂಬಲ್ಲಿ ನಡೆದಿದೆ. ಗ್ರಾಮದ ಸುನ್ನತ್ ಕರೆಯ ಸಂಶುದ್ದೀನ್ ಎಂಬಾತನೇ ಮನೆಬಿಟ್ಟು ಹೋದ ವ್ಯಕ್ತಿ ಪತ್ನಿ ಹಾಗೂ ಎರಡು ಗಂಡು ಮಕ್ಕಳೊಂದಿಗೆ ವಾಸವಾಗಿದ್ದ ಸಂಶುದ್ದೀನ್ ನ ಪತ್ನಿ ಸುಮಾರು ಎರಡು ತಿಂಗಳ ಹಿಂದೆ ತವರು ಮನೆಗೆ ಹೋಗಿದ್ದು ಪ್ರತೀದಿನ ಪತಿಯೊಂದಿಗೆ ಫೋನ್ ಮೂಲಕ ಮಾತನಾಡುತ್ತಿದ್ದರು ಎನ್ನಲಾಗಿದೆ. ಡಿ.‌ 18ರಂದು ಪತಿ ಯಾವುದೇ ಕರೆ ಮಾಡದೇ ಇದ್ದು, ಡಿ. 19 ರಂದು ಪತ್ನಿ

ಬೆಳ್ತಂಗಡಿ: ಪತ್ನಿಯನ್ನು ತವರಿಗೆ ಕಳುಹಿಸಿ ಪತಿ ಹೋಗಿದ್ದೆಲ್ಲಿಗೆ?| ಅನುಮಾನಗೊಂಡ ಪತ್ನಿಯಿಂದ ದೂರು|h Read More »

“ಸೆಕ್ಸ್ ಬಳಿಕ ಮದುವೆಯಾಗಲು ನಿರಾಕರಿಸಿದರೆ ಅದು ಮೋಸವಲ್ಲ” – ಬಾಂಬೆ ಹೈಕೋರ್ಟ್

ಮುಂಬೈ: ಹಲವು ಕಾಲದ ದೈಹಿಕ ಸಂಬಂಧದ ನಂತರ ಮದುವೆ ಮಾಡಿಕೊಳ್ಳಲು ನಿರಾಕರಿಸಿದರೆ, ಅದನ್ನು ವಂಚನೆ ಎನ್ನಲಾಗದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದೂರಿನ ವಿಚಾರಣೆ ನಡೆಸಿದ ಕೋರ್ಟ್ ಈ ರೀತಿ ಹೇಳಿದೆ. ಮಹಿಳೆಯೋರ್ವರು ತನ್ನ ಪ್ರಿಯಕರನ ಮೇಲೆ ಸೆಕ್ಷನ್ 376 ಮತ್ತು 417 ರ ಅಡಿಯಲ್ಲಿ ಅತ್ಯಾಚಾರ ಮತ್ತು ವಂಚನೆ ಪ್ರಕರಣವನ್ನು ದಾಖಲು ಮಾಡಿದ್ದರು. ಮದುವೆಯ ಭರವಸೆ ನೀಡಿ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿ ನಂತರ ವಂಚಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ,

“ಸೆಕ್ಸ್ ಬಳಿಕ ಮದುವೆಯಾಗಲು ನಿರಾಕರಿಸಿದರೆ ಅದು ಮೋಸವಲ್ಲ” – ಬಾಂಬೆ ಹೈಕೋರ್ಟ್ Read More »

ಕರ್ನಾಟಕದಲ್ಲಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ| ಡಿ.31 ಕ್ಕೆ “ಕರ್ನಾಟಕ ಬಂದ್”

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಕನ್ನಡಿಗರು, ಕನ್ನಡ ನಾಡಿನ ಆಸ್ತಿಪಾಸ್ತಿ ಮೇಲೆ ಎಂಇಎಸ್ ದಬ್ಬಾಳಿಕೆ ಹಾಗೂ ಖಂಡಿಸಿ, ಸಂಘಟನೆಯನ್ನು ಕರ್ನಾಟಕದಲ್ಲಿ ನಿಷೇಧ ಮಾಡಬೇಕೆಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಹೊಸ ವರ್ಷ ಮುನ್ನಾದಿನ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್: ಕರ್ನಾಟಕ, ಕನ್ನಡ ನಾಡು ನುಡಿಯ ಒಗ್ಗಟ್ಟಿಗೆ ಕನ್ನಡಿಗರು ಈ ಸಂದರ್ಭದಲ್ಲಿ ಒಟ್ಟಾಗಿ ಶಕ್ತಿಯನ್ನು ಪ್ರದರ್ಶಿಸಬೇಕು. 25ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಕನ್ನಡಿಗರೆಲ್ಲರೂ ನಮಗೆ ಬೆಂಬಲ ನೀಡಬೇಕು.

ಕರ್ನಾಟಕದಲ್ಲಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ| ಡಿ.31 ಕ್ಕೆ “ಕರ್ನಾಟಕ ಬಂದ್” Read More »

ಮತಾಂತರ ನಿಷೇಧ ವಿಧೇಯಕ ಚರ್ಚೆ ಹಿನ್ನೆಲೆ| ಮಾಧ್ಯಮಗಳಿಗೆ ನಿರ್ಬಂಧ ಹೇರಿದ ಸ್ಪೀಕರ್ ಕಾಗೇರಿ|

ಬೆಳಗಾವಿ : ಇಂದು ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕದ ಮೇಲೆ ಚರ್ಚೆ ಹಿನ್ನೆಲೆಯಲ್ಲಿ ಸುವರ್ಣ ಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ. ಇಂದು ಮತಾಂತರ ನಿಷೇಧ ವಿಧೇಯಕದ ಮೇಲೆ ಚರ್ಚೆ ಹಿನ್ನೆಲೆಯಲ್ಲಿ ಸುವರ್ಣಸೌಧಕ್ಕೆ ಮಾಧ್ಯಮ ಪ್ರತಿನಿಧಿಗಳನ್ನು ಸುವರ್ಣಸೌಧದ ಒಳಗೆ ಬಿಡದಂತೆ ಸ್ಪೀಕರ್ ಕಾಗೇರಿ ಸೂಚನೆ ನೀಡಿದ್ದಾರೆ. ಸುವರ್ಣಸೌಧದ ಒಳಗೆ ಯಾವುದೇ ಗೇಟ್ ಗಳಿಂದಲೂ ಮಾಧ್ಯಮ ಪ್ರತಿನಿಧಿಗಳನ್ನು ಬಿಡದಂತೆ ಮಾರ್ಷೆಲ್ ಗಳಿಗೆ ಸ್ಪೀಕರ್ ಕಾಗೇರಿ ಅವರು ಸೂಚನೆ ನೀಡಿದ್ದಾರೆ.

ಮತಾಂತರ ನಿಷೇಧ ವಿಧೇಯಕ ಚರ್ಚೆ ಹಿನ್ನೆಲೆ| ಮಾಧ್ಯಮಗಳಿಗೆ ನಿರ್ಬಂಧ ಹೇರಿದ ಸ್ಪೀಕರ್ ಕಾಗೇರಿ| Read More »

ಖಾಸಗಿ ಚಿತ್ರಗಳನ್ನು ತೆಗೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾತನನ್ನು ಕೊಲೆಗೈದ ಬಾಲಕಿಯರು| ಆರೋಪಿತರು ಅಂದರ್

ಚೆನ್ನೈ: ಬಾಲಕಿಯರ ಖಾಸಗಿ ಚಿತ್ರಗಳನ್ನು ತೆಗೆದು ಬ್ಲಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿರುವ ಆರೋಪದಲ್ಲಿ ಇಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಪ್ರೇಮ್ ಕುಮಾರ್ ಎಂದು ಗುರುತಿಸಲಾಗಿದೆ.ಸದ್ಯ ಬಂಧಿತರಾಗಿರುವ ಇಬ್ಬರು ಬಾಲಕಿಯರೊಂದಿಗೆ ಸತ್ತ ವ್ಯಕ್ತಿ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇಬ್ಬರ ಖಾಸಗಿ ಫೋಟೋಗಳನ್ನು ತೆಗೆದು, ಮೊಬೈಲ್ ನಲ್ಲಿ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ್ದಾನೆ. ಅಲ್ಲದೇ, ಇಬ್ಬರಿಗೂ 50 ಸಾವಿರ ರೂಪಾಯಿ ನೀಡುವಂತೆ ಕೇಳಿದ್ದಾನೆ. ಹಣ ಕೊಡಲು ವಿಫಲವಾದರೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಅಪ್ಲೋಡ್ ಮಾಡುವುದಾಗಿ

ಖಾಸಗಿ ಚಿತ್ರಗಳನ್ನು ತೆಗೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾತನನ್ನು ಕೊಲೆಗೈದ ಬಾಲಕಿಯರು| ಆರೋಪಿತರು ಅಂದರ್ Read More »

ಸುಳ್ಯ: ಸ್ವಂತ ಅಂಗಡಿಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಕಂಡುಬಂದ ಮಾಜಿ ಗ್ರಾ.ಪಂ ಸದಸ್ಯನ ಶವ

ಸುಳ್ಯ : ಮಾಜಿ ಗ್ರಾಮ ಪಂಚಾಯತ್ ಸದಸ್ಯರೋರ್ವರು ತನ್ನ ಅಂಗಡಿಯ ಕೋಣೆಯೊಳಗಡೆ ಮಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಾಲೂಕಿನ ಅಡ್ತಲೆಯಲ್ಲಿ ನಡೆದಿದೆ ಮರ್ಕಂಜ ಗ್ರಾಮದ ಕಾಯರ ಭೋಜಪ್ಪ(48) ರವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಮರ್ಕಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದರು. ಭೋಜಪ್ಪರವರು ಅಡ್ತಲೆಯಲ್ಲಿ ಅಂಗಡಿ ನಡೆಸುತ್ತಿದ್ದು ತನ್ನ ಅಂಗಡಿಯಲ್ಲೇ ನೇಣು ಬಿಗಿದುಕೊಂಡಿರುವುದಾಗಿ ಮೇಲ್ನೋಟಕ್ಕೆ ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ ಭವಾನಿ, ಪುತ್ರಿ ರಕ್ಷಾ, ಪುತ್ರ ಯತಿನ್ ರನ್ನು ಅಗಲಿದ್ದಾರೆ.

ಸುಳ್ಯ: ಸ್ವಂತ ಅಂಗಡಿಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಕಂಡುಬಂದ ಮಾಜಿ ಗ್ರಾ.ಪಂ ಸದಸ್ಯನ ಶವ Read More »