January 2022

ಬೆಂಗಳೂರಿನಲ್ಲಿ ಕಡಬದ ಯುವಕನ ದಾರುಣ ಸಾವು| ಅಪಘಾತದಲ್ಲಿ ರಸ್ತೆಗೆಸೆದವನ ಮೇಲೆ ಹರಿಯಿತು ಯಮಸ್ವರೂಪಿ ಲಾರಿ

ಸಮಗ್ರ ನ್ಯೂಸ್ ಡೆಸ್ಕ್: ಅಪಘಾತಕ್ಕೀಡಾಗಿ ರಸ್ತೆಗೆಸೆಯಲ್ಪಟ್ಟಿದ್ದ ಯುವಕನ ಮೇಲೆ ಲಾರಿ ಹರಿದು ದಾರುಣವಾಗಿ ಮೃತಪಟ್ಟ ಘಟನೆ ಇಂದು(ಜ.31) ನಡೆದಿದೆ. ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಆಲಂಕಾರು ಮೂಲದ ಶರವೂರಿನ ನಂದೀಪ್(21) ಎಂದು ಗುರುತಿಸಲಾಗಿದೆ. ಈತನ ಜೊತೆಗಿದ್ದ ಸಹ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಇವರು ಬೆಂಗಳೂರಿನ ಜಿಗಣಿಯಲ್ಲಿ ಇಂಡಸ್ಟ್ರಿಯಲ್ ಏರಿಯದ ಕಂಪೆನಿಯೊಂದರಲ್ಲಿ ಉದ್ಯೋಗ ದಲ್ಲಿದ್ದು ಬೆಳಿಗ್ಗೆ ಕೆಲಸಕ್ಕೆಂದು ಹಳೆನೇರಂಕಿಯ ನಿವಾಸಿ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದರು ಎನ್ನಲಾಗಿದ್ದು, ಈ ಸಂದರ್ಭದಲ್ಲಿ ಅಟೋ ರಿಕ್ಷಾವೊಂದು ಹಠತ್ತಾಗಿ ಬಲಕ್ಕೆ ತಿರುಗಿದಾಗ ಅದಕ್ಕೆ […]

ಬೆಂಗಳೂರಿನಲ್ಲಿ ಕಡಬದ ಯುವಕನ ದಾರುಣ ಸಾವು| ಅಪಘಾತದಲ್ಲಿ ರಸ್ತೆಗೆಸೆದವನ ಮೇಲೆ ಹರಿಯಿತು ಯಮಸ್ವರೂಪಿ ಲಾರಿ Read More »

‘ಭಾರತದಲ್ಲಿ ಸರ್ಕಾರದ ಆದೇಶ ಪಾಲಿಸಬೇಕು’ -ರಹೀಂ ಉಚ್ಚಿಲ|

ಸಮಗ್ರ ನ್ಯೂಸ್ ಡೆಸ್ಕ್: ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿವಾದಗಳು ನಡೆಯುತ್ತಿದ್ದು, ಶರಿಯತ್ ಆಧಾರಿತ ರಾಷ್ಟ್ರ ಬೇರೆ ಪ್ರಜಾಪ್ರಭುತ್ವ ರಾಷ್ಟ್ರ ಬೇರೆ, ಭಾರತದಲ್ಲಿ ಸರ್ಕಾರದ ಆದೇಶ ಪಾಲಿಸಬೇಕು ಎಂದು ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಹೇಳಿದ್ದಾರೆ. ಹಿಜಾಬ್ ವಿವಾದದ ಕುರಿತು ಶಾಸಕರ ನೇತೃತ್ವದಲ್ಲಿ ಕಾಲೇಜಿನಲ್ಲಿ ಸಭೆ ನಡೆದಿದ್ದು ಈ ವೇಳೆ ಮಾತನಾಡಿದ ರಹೀಂ ಉಚ್ಚಿಲ, ಹಿಜಾಬ್ ಧರಿಸದೆ ಕಾಲೇಜಿಗೆ ಬರಲು ನಾಳೆ ಒಂದು ದಿನ ಅವಕಾಶ ಇದೆ. ಕಾಲೇಜಿಗೆ

‘ಭಾರತದಲ್ಲಿ ಸರ್ಕಾರದ ಆದೇಶ ಪಾಲಿಸಬೇಕು’ -ರಹೀಂ ಉಚ್ಚಿಲ| Read More »

ಬಂಟ್ವಾಳ: ಯುವತಿಯ ಫೋಟೋ ಬಳಸಿ ಜಾಲತಾಣದಲ್ಲಿ ಮಾನಭಂಗ| ಹಣದ ಆಸೆಯ ದಂಪತಿ ಅರೆಸ್ಟ್

ಸಮಗ್ರ ಕ್ರೈಂ ಡೆಸ್ಕ್: ಹಣ ಗಳಿಸುವ ಉದ್ದೇಶದಿಂದ ಯೂಟ್ಯೂಬ್ ಚಾನೆಲ್ ನಲ್ಲಿ ಯುವತಿಯ ಪೋಟೋ ದುರುಪಯೋಗ ಮಾಡಿದ್ದ ಆರೋಪದಲ್ಲಿ ದಂಪತಿಯನ್ನು ಬಂಟ್ವಾಳ ನಗರ ಠಾಣಾ ಎಸ್. ಐ. ಅವಿನಾಶ್ ನೇತ್ರತ್ವದ ತಂಡ ಶಿವಮೊಗ್ಗದಲ್ಲಿ ಬಂಧಿಸಿದ್ದಾರೆ. ಬಂಟ್ವಾಳ ಮೂಲದ ಪ್ರತಿಷ್ಠಿತ ಕುಟುಂಬದ ಯುವತಿಯೋರ್ವಳ ಪೋಟೋ ಒಂದನ್ನು ಕನ್ನಡ ಲೈಟ್ ಎಂಬ ಯೂಟ್ಯೂಬ್ ಚಾನೆಲ್ ನಲ್ಲಿ ಬಳಕೆ ಮಾಡಿಕೊಂಡಿದ್ದರು ಎಂಬ ದೂರು ಬಂಟ್ವಾಳ ನಗರ ಪೋಲೀಸ್ ಠಾಣೆಯ ಲ್ಲಿ ದೂರು ದಾಖಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಎಸ್.ಐ.ಅವಿನಾಶ್ ನೇತ್ರತ್ವದ

ಬಂಟ್ವಾಳ: ಯುವತಿಯ ಫೋಟೋ ಬಳಸಿ ಜಾಲತಾಣದಲ್ಲಿ ಮಾನಭಂಗ| ಹಣದ ಆಸೆಯ ದಂಪತಿ ಅರೆಸ್ಟ್ Read More »

ಬೆಳ್ತಂಗಡಿ: ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ ವರ್ಗಾವಣೆಗೆ ತಡೆ

ಸಮಗ್ರ ನ್ಯೂಸ್ ಡೆಸ್ಕ್: ಉಡುಪಿ ವಲಯದ ಅರಣ್ಯ ಸಂಚಾರಿ ದಳದ ಮಹಿಳಾ ಅಧಿಕಾರಿ ಸಂಧ್ಯಾ ಸಚಿನ್ ರನ್ನು ಬೀದರ್‌ಗೆ ವರ್ಗಾವಣೆ ಮಾಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಇದೀಗ ಅವರನ್ನು ಪ್ರಸ್ತುತ ಇರುವ ಸ್ಥಳದಲ್ಲೇ ಕರ್ತವ್ಯದಲ್ಲಿ ಮುಂದುವರೆಯುವಂತೆ ಹಿರಿಯ ಅರಣ್ಯ ಅಧಿಕಾರಿಗಳು ಮೌಖಿಕವಾಗಿ ತಿಳಿಸಿದ್ದು, ಸರ್ಕಾರದಿಂದ ಅಧಿಕೃತವಾದ ಯಾವುದೇ ಆದೇಶ ಬಂದಿಲ್ಲ ಎಂದು ತಿಳಿದು ಬಂದಿದೆ. ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ

ಬೆಳ್ತಂಗಡಿ: ಮಹಿಳಾ ಅರಣ್ಯಾಧಿಕಾರಿ ಸಂಧ್ಯಾ ವರ್ಗಾವಣೆಗೆ ತಡೆ Read More »

ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಆಯ್ಕೆಯಲ್ಲಿ ಈ ಹಿಂದೆ ಗೊಂದಲ ಉಂಟಾಗಿದ್ದು, ಯುವ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿದ್ದ ಮೊಹಮ್ಮದ್‌ ನಲಪಾಡ್‌ ಅವರನ್ನು ಅನರ್ಹಗೊಳಿಸಿ, ನಂತರದ ಸ್ಥಾನಗಳಿಸಿದ್ದ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು. ಇನ್ನು ಕಾಂಗ್ರೆಸ್‌ನ ಹಿರಿಯ ನಾಯಕರು ಸಂಧಾನ ನಡೆಸಿ ರಕ್ಷಾ ರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಿ ಅವರ ಅಧಿಕಾರದ ಅವಧಿ

ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕಾರ Read More »

ಉಡುಪಿ: ‘ಹಿಜಾಬ್ ತೆಗೆದಿಟ್ಟು ಬರುವುದಾದರೆ ಬನ್ನಿ, ನಾಳೆಯೇ ಕೊನೆದಿನ’ – ಸಭೆ ಬಳಿಕ ಶಾಸಕ ರಘುಪತಿ ಭಟ್ ಹೇಳಿಕೆ

ಸಮಗ್ರ ನ್ಯೂಸ್ ಡೆಸ್ಕ್: ಇಲ್ಲಿನ ಸರ್ಕಾರಿ ಮಹಿಳಾ ಕಾಲೇಜು ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕಾಲೇಜಿನಲ್ಲಿ ಸಭೆ ನಡೆಸಲಾಗಿದೆ. ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರು ಕಾಲೇಜಿನ ಆಡಳಿತ ಮಂಡಳಿ, ಡಿಡಿಪಿಯು ಸಭೆಯಲ್ಲಿ ಭಾಗಿ ಆಗಿದ್ದಾರೆ. ಒಂದೂವರೆ ತಿಂಗಳುಗಳ ಕಾಲ ಈ ವಿವಾದ ನಡೆಯಿತು. ಹಿಜಾಬ್ ಧರಿಸದೆ ಕಾಲೇಜಿಗೆ ಬರಲು ನಾಳೆ ಒಂದು ದಿನ ಅವಕಾಶ ಇದೆ. ಕಾಲೇಜಿಗೆ ಬರದಿದ್ದರೆ ಆನ್ಲೈನ್ ಕ್ಲಾಸ್ ಅವಕಾಶ ಮಾಡಲಾಗಿದೆ. ಇನ್ನು ವಿದ್ಯಾರ್ಥಿಗಳು ಹೆಸರಿಗಾಗಿ ಹಠ ಮಾಡುವುದು

ಉಡುಪಿ: ‘ಹಿಜಾಬ್ ತೆಗೆದಿಟ್ಟು ಬರುವುದಾದರೆ ಬನ್ನಿ, ನಾಳೆಯೇ ಕೊನೆದಿನ’ – ಸಭೆ ಬಳಿಕ ಶಾಸಕ ರಘುಪತಿ ಭಟ್ ಹೇಳಿಕೆ Read More »

ಬೆಂಗಳೂರು: ಪ್ರತಿಭಟನೆಯಲ್ಲಿ ತೊಡಗಿದ್ದ ಎಬಿವಿಪಿ‌ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್

ಸಮಗ್ರ ನ್ಯೂಸ್ ಡೆಸ್ಕ್ : ವಿದ್ಯಾರ್ಥಿ ವೇತನ, ಹಾಸ್ಟೆಲ್, ಮೌಲ್ಯಮಾಪನ ಸೇರಿದಂತೆ ಹಲವು ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಎಬಿವಿಪಿ ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಲಾಠಿ ಚಾರ್ಜ್ ನಡೆದಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ‌ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿಯೇ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಅಲ್ಲದೇ, ಪ್ರತಿಭಟನೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮಧ್ಯೆಯೂ ಜಗಳ ನಡೆದಿದ್ದು, ಇಲ್ಲಿಯ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿವಿ ಸಂಶೋಧನಾ ವಿದ್ಯಾರ್ಥಿಗಳ ನಡುವೆ ಜಗಳ ಆರಂಭವಾಗಿದೆ.

ಬೆಂಗಳೂರು: ಪ್ರತಿಭಟನೆಯಲ್ಲಿ ತೊಡಗಿದ್ದ ಎಬಿವಿಪಿ‌ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ Read More »

ಮಂಗಳೂರು: ಬಸ್ ಚಾಲಕನಿಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಸಮಗ್ರ ನ್ಯೂಸ್ ಡೆಸ್ಕ್: ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಬಸ್ ಚಾಲಕನೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಮೂಲದ ದಯಾನಂದ(32) ಎಲ ಬಂಧಿತ ಆರೋಪಿ. ನಗರದಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ದಯಾನಂದ 13 ವರ್ಷದ ಬಾಲಕಿಯನ್ನು ಪುಸಲಾಯಿಸಿ ನಿರ್ಜನ‌ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಬಾಲಕಿಯ ಪೋಷಕರು ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು. ಪೋಕ್ಸೊ ಪ್ರಕರಣದಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರು: ಬಸ್ ಚಾಲಕನಿಂದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ Read More »

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್| ‘ಪೂರ್ಣ ಕ್ಯಾರಿ ಓವರ್’ಗೆ ಅನುಮತಿ

ಸಮಗ್ರ ನ್ಯೂಸ್ ಡೆಸ್ಕ್: ಕೊರೋನಾ ಸೋಂಕಿನಿಂದಾಗಿ 2021-22ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ `ಪೂರ್ಣ ಕ್ಯಾರಿ ಓವರ್’ಗೆ ಅನುಮತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಅವರು, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ 4 ವಿಷಯಗಳಿಗೆ ಮಾತ್ರ ಕ್ಯಾರಿ ಓವರ್ ಕೊಡುವ ಪದ್ಧತಿ ಇದೆ. ಆದರೆ, ಕೊರೋನಾ ಸೋಂಕು ವ್ಯಾಪಕವಾಗಿ ಹಬ್ಬಿದ್ದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಸ್ತಕ ಶೈಕ್ಷಣಿಕ ವರ್ಷಕ್ಕೆಪೂರ್ಣ ಕ್ಯಾರಿ ಓವರ್’ಗೆ ಅವಕಾಶ

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್| ‘ಪೂರ್ಣ ಕ್ಯಾರಿ ಓವರ್’ಗೆ ಅನುಮತಿ Read More »

ಬೈಕ್ ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಗುದ್ದಿದ ಲಾರಿ| ಗರ್ಭಿಣಿ ಮಹಿಳೆ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್ ಡೆಸ್ಕ್: ಗರ್ಭಿಣಿ ಪತ್ನಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ, ಪತಿಯ ಕಣ್ಣೆದುರಿಗೆ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕಿಕ್ಕೇರಿಯ ಬಳಿಯಲ್ಲಿ ಬೈಕ್ ನಲ್ಲಿ ಗರ್ಭಿಣಿ ಪತ್ನಿ ಸಹನ ಹಾಗೂ ಪತಿ ಸಂದೀಪ್ ಚನ್ನರಾಯಪಟ್ಟಣಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಲಾರಿಯೊಂದು ಹಿಂಬದಿಯಿಂದ ಡಿಕ್ಕಿಯಾಗಿದೆ. ಪರಿಣಾಮವಾಗಿ ಬೈಕ್ ನಲ್ಲಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದಿದ್ದಾರೆ. ಆ ವೇಳೆ ಲಾರಿ ಸಹನ ತಲೆಯ

ಬೈಕ್ ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಗುದ್ದಿದ ಲಾರಿ| ಗರ್ಭಿಣಿ ಮಹಿಳೆ ಸ್ಥಳದಲ್ಲೇ ಸಾವು Read More »