ಚೆನ್ನೈ : ತಮಿಳುನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶಿವಕಾಶಿಯ ಪಟಾಕಿ ಕಾರ್ಖಾನೆ ಯೊಂದರಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಸ್ಫೋಟದಿಂದ ಧ್ವಂಸಗೊಂಡ ಕಾರ್ಖಾನೆ ಬಳಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿವೆ.
ಪಟಾಕಿ ಸ್ಪೋಟ ದುರಂತದಲ್ಲಿ ನಾಲ್ವರೂ ಕೂಡ ಸಜೀವ ದಹನಗೊಂಡಿದ್ದಾರೆ ಎಂದು ಹೇಳಲಾಗಿದೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.