ನವದೆಹಲಿ : ಹೊಸ ವರ್ಷದಂದು ಇಂಡಿಯನ್ ಆಯಿಲ್ ಜನತೆಗೆ ಗುಡ್ ನ್ಯೂಸ್ ನೀಡಿದೆ. ಇಂಡಿಯನ್ ಆಯಿಲ್ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಕಡಿತಗೊಳಿಸಲು ನಿರ್ಧರಿಸಿದೆ. ಇದರಿಂದ ಜನತೆಗೆ ನೆಮ್ಮದಿ ದೊರೆಯಲಿದೆ.
ಡಿಸೆಂಬರ್ ತಿಂಗಳ ಆರಂಭದಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ಡಿಸೆಂಬರ್ ನಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ 100 ರೂ. ಆದರೆ, ಆಗ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ ಎಂಬುದು ಜನರ ಪಾಲಿಗೆ ಸಮಾಧಾನದ ಸಂಗತಿಯಾಗಿತ್ತು. ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಇಳಿಕೆಯಿಂದ ರೆಸ್ಟೋರೆಂಟ್ ಮಾಲೀಕರಿಗೆ ನೆಮ್ಮದಿ ಸಿಕ್ಕಿದೆ.







