ಬೆಂಗಳೂರು: ಇನ್ಫೋಸಿಸ್ ಫೌಂಡೇಶನ್ನ ಅಧ್ಯಕ್ಷೆ ಮತ್ತು ಭಾರತದ ಅತಿದೊಡ್ಡ ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಗಳಲ್ಲಿ ಒಂದಾದ ಇನ್ಫೋಸಿಸ್ನ ಯಶಸ್ಸಿನಲ್ಲಿನ ಪ್ರಮುಖ ಪಾತ್ರಧಾರಿ, ಸುಧಾ ಮೂರ್ತಿ ಅವರು ಶುಕ್ರವಾರ ಇನ್ಫೋಸಿಸ್ ಫೌಂಡೇಶನ್ನ ಅಧ್ಯಕ್ಷೆ ಹುದ್ದೆಯನ್ನು ಅಂತಿಮವಾಗಿ ತ್ಯಜಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಈ ನಡುವೆ ಅವರು ಹಲವು ದಶಕಗಳಿಂದ ಸಲ್ಲಿಸುತ್ತಿರುವ ಸಮಾಜ ಸೇವೆಯನ್ನು ಮುಂದುವರೆಸಿಕೊಂಡು ಹೋಗಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಸುಧಾ ಮೂರ್ತಿ ಕನ್ನಡ ಮತ್ತು ಇಂಗ್ಲಿಷ್ ನ ಬರಹಗಾರ್ತಿಯಾಗಿ ಕೂಡ ಗುರುತಿಸಿಕೊಂಡಿದ್ದು, ಸುಧಾ ಮೂರ್ತಿಯವರು ತಮ್ಮ ವೃತ್ತಿಪರ ಜೀವನವನ್ನು ಕಂಪ್ಯೂಟರ್ ವಿಜ್ಞಾನಿ ಮತ್ತು ಎಂಜಿನಿಯರ್ ಆಗಿ ಆರಂಭಿಸಿದರು. ಅವರು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದರು ಕೂಡ. ಇದಲ್ಲದೇ ಅವರು ‘ಬಿಲ್ ಗೇಟ್ಸ್ ಪ್ರತಿಷ್ಠಾನ’ದ ಸಾರ್ವಜನಿಕ ಆರೋಗ್ಯ ಉಪಕ್ರಮಗಳ ಸದಸ್ಯರಾಗಿದ್ದಾರೆ. ಸುಧಾ ಮೂರ್ತಿ (ಆಗಿನ್ನೂ ಸುಧಾಕುಲಕರ್ಣಿ) ಅವರು ಟೆಲ್ಕೊದ ಪುಣೆ, ಮುಂಬಯಿ ಹಾಗು ಜಮ್ ಶೇಡ್ ಪುರ ಶಾಖೆಗಳಲ್ಲಿ ಡೆವಲಪ್ಮೆಂಟ್ ಇಂಜನಿಯರ್ ಆಗಿ ದುಡಿದಿದ್ದಾರೆ. ಟೆಲ್ಕೊಗೆ ಪ್ರವೇಶ ಪಡೆದ ಪ್ರಥಮ ಮಹಿಳಾ ಇಂಜನಿಯರ್ ಎನ್ನುವ ಹೆಗ್ಗಳಿಕೆ ಇವರದು. ಆಬಳಿಕ ಇವರು ಪುಣೆಯ ವಾಲಚಂದ ಗ್ರೂಪ್ ಆಫ್ ಇಂಡಸ್ಟ್ರೀಜ್ ನಲ್ಲಿ ಸೀನಿಯರ್ ಸಿಸ್ಟಮ್ಸ್ ಅನಲಿಸ್ಟ್ ನಲ್ಲಿ ಕೆಲಕಾಲ ಸೇವೆ ಸಲ್ಲಿಸಿದ್ದರು.







