ಸುದ್ದಿ ನಿರೂಪಕ ಅಜಿತ್ ಹನುಮಕ್ಕನವರ್ ಗೆ ಹೃದಯಾಘಾತ!!

Ad Widget ... ..

ಬೆಂಗಳೂರು: ಕನ್ನಡದ ಸುವರ್ಣ ಸುದ್ದಿ ವಾಹಿನಿಯ ಸುದ್ದಿ ನಿರೂಪಕ ಅಜಿತ್ ಹನುಮಕ್ಕನವರ್ ಗೆ ಹೃದಯಾಘಾತವಾಗಿರುವ ಬಗ್ಗೆ ವರದಿಯಾಗಿದೆ.

Ad Widget

ತಮ್ಮ ಮನೆಯಿಂದ ಕಾರಿನಲ್ಲಿ ಪ್ರಯಾಣಿಸುವಾಗ ಹನುಮಕ್ಕನವರ್ ಗೆ ಹೃದಯಾಘಾತವಾಗಿದೆ.ಈ ಸಂದರ್ಭದಲ್ಲಿ ಅವರೇ ಕಾರು ಡ್ರೈವ್ ಮಾಡಿಕೊಂಡು ಸದಾಶಿವನಗರದ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಧಾವಿಸಿ ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ. ಸಮಯಪ್ರಜ್ಞೆಯಿಂದ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಬಂದಿದ್ದರಿಂದ ಭಾರೀ ಅನಾಹುತ ತಪ್ಪಿತು ಎಂದು ವೈದ್ಯರು ಹೇಳಿದ್ದು ಅಜಿತ್ ಗೆ ಮೂರು ಸ್ಟಂಟ್ ಗಳನ್ನು ಅಳವಡಿಸಿದ್ದಾರೆ ಎನ್ನಲಾಗಿದೆ.

ಸ್ವಲ್ಪ ಹೊತ್ತು ಐಸಿಯುನಲ್ಲಿದ್ದ ಅವರನ್ನು ನಂತರ ವಾರ್ಡ್ ಗೆ ಶಿಫ್ಟ್ ಮಾಡಲಾಯಿತು.ತೀವ್ರ ಕಾರ್ಯ ಒತ್ತಡ ಹಾಗೂ ದಣಿವರಿಯದ ಕೆಲಸವೇ ಅಜಿತ್ ಅವರ ಹೃದಯಾಘಾತಕ್ಕೆ ಕಾರಣ ಎನ್ನಲಾಗಿದೆ. ಸಧ್ಯ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಜಿತ್ ಅವರಿಗೆ ವೈದ್ಯರು ಒಂದಷ್ಟು ದಿನ ವಿಶ್ರಾಂತಿ ಪಡೆಯಲು ತಿಳಿಸಿದ್ದಾರೆ ಎಂದು ಲೋಕಲ್ ಪೋರ್ಟಲ್ ವೊಂದು ವರದಿ ಮಾಡಿದೆ.

Leave a Comment

Your email address will not be published. Required fields are marked *